ಚಾಮರಾಜನಗರ: ರೋಟರಿ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 350 ಮಂದಿ ನೇತ್ರ ತಪಾಸಣೆ ಮಾಡಿಸಿಕೊಂಡರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ.ಚಿಂತಾಮಣಿ ಗ್ರಾಮೀಣ ಪ್ರದೇಶದಲ್ಲಿ ನೇತ್ರ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು ಸರ್ಕಾರ ಹಳ್ಳಿಗಳಲ್ಲಿ ದೃಷ್ಟಿ ಕೇಂದ್ರಗಳನ್ನು ತೆರೆಯಬೇಕು. ಗಂಭೀರ ದೃಷ್ಟಿದೋಷದ ಸಮಸ್ಯೆ ಇರುವವರಿಗೆ ಶಸ್ತ್ರಚಿಕಿತ್ಸೆಯ ಮೂಲಕ ಅವರ ಬಾಳಿಗೆ ಬೆಳಕು ನೀಡುವ ಕೆಲಸ ಮಾಡಬೇಕು ಎಂದರು.
ರೋಟರಿ ಸಂಸ್ಥೆಯ ಶಿಬಿರಗಳು ದೃಷ್ಟಿದೋಷ ಇರುವವರ ಪಾಲಿಗೆ ಆಶಾಕಿರಣವಾಗಿದೆ. ಸಂಸ್ಥೆಯ ಸೇವೆ ಎಲ್ಲೆಡೆ ವಿಸ್ತಾರವಾಗಲಿ, ಬಡವರಿಗೆ ಮತ್ತಷ್ಟು ಸೇವೆ ದೊರೆಯಲಿದೆ ಎಂದರು.
ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ರೋಟರಿ ಸಂಸ್ಥೆ ಪ್ರತಿ ತಿಂಗಳ ಮೊದಲ ಭಾನುವಾರ ಉಚಿತವಾಗಿ ನೇತ್ರ ತಪಾಸಣಾ ಶಿಬಿರ ಆಯೋಜಿಸಿಕೊಂಡು ಬರುತ್ತಿದ್ದು, ದೃಷ್ಟಿದೋಷ ಇರುವವರು ಶಿಬಿರದ ಪ್ರಯೋಜನ ಪಡೆಯಬೇಕು ಎಂದರು.
ನೇತ್ರ ತಪಾಸಣೆ ಮಾಡಿಸಿಕೊಂಡವರ ಪೈಕಿ 200 ಮಂದಿಯನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಿ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಯಲ್ಲಿ ನಡೆಯುವ ಶಿಬಿರದಲ್ಲಿ ಶಸ್ತಚಿಕಿತ್ಸೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಯಿತು.
ರೋಟರಿ ಸಂಸ್ಥೆಯ ಕಾರ್ಯದರ್ಶಿ ಕೆಂಪನಪುರ ಸಿದ್ದರಾಜು, ಸಂಸ್ಥಾಪಕ ಸದಸ್ಯ ಶ್ರೀನಿವಾಸಶೆಟ್ಟಿ, ಜಿ.ಆರ್.ಅಶ್ವಥ್ ನಾರಾಯಣ್, ಮಾಜಿ ಅಧ್ಯಕ್ಷ ನಾಗರಾಜು, ಆರ್.ಎಂ.ಸ್ವಾಮಿ, ಮೋಹನ್, ಎಸ್.ಆರ್.ಶ್ರೀನಿವಾಸ, ಕೆ.ಎಂ.ಮಹದೇವಸ್ವಾಮಿ, ಎ.ಶ್ರೀನಿವಾಸನ್, ಸುರೇಶ್, ಮುಂದಿನ ಸಾಲಿನ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಉಪಾಧ್ಯಕ್ಷ ಗುರುಸ್ವಾಮಿ, ಸಂಜಯ್ ಕುಮಾರ್ ಜೈನ್, ಅಂಕಶೆಟ್ಟಿ, ರಾಮು, ಮಹದೇವಪ್ಪ, ಪ್ರಸಾದ್, ನೇಮಿರಾಜ್, ಪಿಆರ್‌ಒ ವಿಜಯಕಾಂತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.