ಹನೂರು: ಸಮೀಪದ ಗುಂಡಾಲ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾದ ಹಿನ್ನೆಲೆಯಲ್ಲಿ ಹನೂರು ಶಾಸಕ ಎಂ.ಆರ್. ಮಂಜುನಾಥ್ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಜಂಟಿಯಾಗಿ ಶನಿವಾರ ಬಾಗಿನ ಅರ್ಪಿಸಿದರು.
ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಂಡಲ್ ಜಲಾಶಯದ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ, ಕೊಳ್ಳೇಗಾಲ ತಾಲ್ಲೂಕಿನ ಕನ್ನೆಗಾಲ ಪಿಕಪ್ ಸೇರಿದಂತೆ ಕೆರೆಕಟ್ಟೆಗಳು ನಾಲೆಗಳ ಅಭಿವೃದ್ಧಿಗಾಗಿ ₹70 ಕೋಟಿ ಅನುದಾನ ಸೇರಿ ಒಟ್ಟು ₹120 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ಹೀಗಾಗಿ ಇನ್ನೂ ಕೂಡ ಕಬಿನಿ ನಾಲಾ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಮತ್ತು ಜಲಾಶಯಗಳ ಸೇರಿದಂತೆ ಗುಂಡ್ಲುಪೇಟೆ ಎಚ್.ಡಿ. ಕೋಟೆ, ಕೊಳ್ಳೇಗಾಲ ಚಾಮರಾಜನಗರ, ಹನೂರು, ಕಬಿನಿ ಅಚ್ಚುಕಟ್ಟು ಪ್ರದೇಶಗಳ ಅಭಿವೃದ್ಧಿಗೆ ₹505 ಕೋಟಿ ಹೆಚ್ಚುವರಿ ಅನುದಾನ ನೀಡುವಂತೆ ಮನವಿ ಮಾಡಲಾಗಿದೆ’ ಎಂದರು.
ಶಾಸಕ ಎಂ. ಆರ್ ಮಂಜುನಾಥ್ ಮಾತನಾಡಿ, ‘ರಾಮನಗುಡ್ಡ ಹುಬ್ಬೆ ಹುಣಸೆ ಜಲಾಶಯ ಅಭಿವೃದ್ಧಿಗೆ ಕಬಿನಿ ನಾಲಾ ನೀರಾವರಿ ಯೋಜನೆಗೆ ಆದ್ಯತೆ ನೀಡಲು ಹೆಚ್ಚುವರಿಯಾಗಿ ₹950 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.
ಮೈಸೂರು ಕಬಿನಿ ವೃತ್ತ ಅಧೀಕ್ಷಕ ಮಹೇಶ್ ಮಾತನಾಡಿ, ‘ಜಲಾಶಯ ಸೇರಿದಂತೆ ಕಾಲುವೆಗಳಲ್ಲಿ ಹೂಳು ತುಂಬಿರುವುದರಿಂದ ಅದಕ್ಕೆ ಬೇಕಾಗಿರುವ ಅನುದಾನದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಸಹ ಬೆಳಗೆ ತಕ್ಕಂತೆ ನೀರಾವರಿಗೆ ತಕ್ಕಂತೆ ತಮ್ಮ ಬೆಳೆಗಳನ್ನು ಬೆಳೆಯಲು ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.
ಮಾನಸ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಡಾ.ದತ್ತೆಶ್ ಕುಮಾರ್ ಹಾಗೂ ಕಾವೇರಿ ನೀರಾವರಿ ನಿಗಮದ ಎಇಇ ಎಂಜಿನಿಯರ್ ಕರುಣಾಮಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.