ಗುಂಡ್ಲುಪೇಟೆ: ತಾಲ್ಲೂಕಿನ ದೇಶಿಪುರ ಕಾಲೊನಿಯಲ್ಲಿ ಗುರುವಾರ ಮಹಿಳೆಯನ್ನು ಕೊಂದಿರುವ ಹುಲಿಯ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಮುಂದುವರಿಸಿದ್ದಾರೆ.
ದೇಶಿಪುರ ಸುತ್ತಮುತ್ತ ಹಾಗೂ ಕಾಡಂಚಿನ ಪ್ರದೇಶಗಳಲ್ಲಿ ಹುಲಿಯ ಹೆಜ್ಜೆಗಳ ಜಾಡು ಹಿಡಿದು ಕಾರ್ಯಾಚರಣೆ ನಡೆಯುತ್ತಿದ್ದು ಪತ್ತೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಆರ್‌ಎಫ್‌ಒ ಸತೀಶ್ ಮಾಹಿತಿ ನೀಡಿದರು.
ಹುಲಿ ದಾಳಿಯಿಂದ ಮೃತಪಟ್ಟ ಪುಟ್ಟಮ್ಮ ಅವರ ಪಾರ್ಥಿವ ಶರೀರಕ್ಕೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅಂತಿಮ ನಮನ ಸಲ್ಲಿಸಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಸರ್ಕಾರದಿಂದ ದೊರೆಯುವ ಪರಿಹಾರದ ಜೊತೆಗೆ ವೈಯಕ್ತಿಕ ಧನಸಹಾಯ ಮಾಡುವುದಾಗಿ ಭರವಸೆ ನೀಡಿದರು.
ವಲಯಾರಣ್ಯಾಧಿಕಾರಿ ಸತೀಶ್ ಸೇರಿ ಗ್ರಾಮದ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.