ADVERTISEMENT

ಗುಂಡ್ಲುಪೇಟೆ: ಹತ್ತಿ ಮಾರುಕಟ್ಟೆ ಕಾಮಗಾರಿ ಪೂರ್ಣ, ಶಾಸಕ ಗಣೇಶಪ್ರಸಾದ್ ಭೇಟಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2025, 2:56 IST
Last Updated 27 ಆಗಸ್ಟ್ 2025, 2:56 IST
ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರಿನಲ್ಲಿ ಹತ್ತಿ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಗುಂಡ್ಲುಪೇಟೆ ತಾಲ್ಲೂಕಿನ ಬೇಗೂರಿನಲ್ಲಿ ಹತ್ತಿ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು   

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರಿನಲ್ಲಿ ಹತ್ತಿ ಮಾರುಕಟ್ಟೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ₹6 ಕೋಟಿ ವೆಚ್ಚದಲ್ಲಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಹತ್ತಿ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದರು. ಇದೀಗ ಮಾರುಕಟ್ಟೆ ಕೆಲಸ ಪೂರ್ಣಗೊಂಡಿದ್ದು, ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ₹475 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಜೊತೆಗೆ ₹6 ಕೋಟಿ ವೆಚ್ಚದಲ್ಲಿ ಹತ್ತಿ ಮಾರುಕಟ್ಟೆ ಕಾಮಗಾರಿ ಪೂರ್ಣಗೊಂಡಿದೆ. ಸಿಎಂ ಆಹ್ವಾನಿಸಿ ಅವರಿಂದಲೇ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ಹತ್ತಿ ಮಾರುಕಟ್ಟೆ ಉದ್ಘಾಟನೆ ಮಾಡಿಸಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಈ ಸಂದರ್ಭದಲ್ಲಿ ಹಲವು ಮಂದಿ ವರ್ತಕರು ಹುರುಳಿ, ಅಲಸಂದೆ, ಸೂರ್ಯಕಾಂತಿ, ರಾಗಿ ಸೇರಿದಂತೆ ವಿವಿಧ ಬೆಳೆ ಹಾಗೂ ದಿನಸಿ ಪದಾರ್ಥಗಳ ವ್ಯಾಪಾರಕ್ಕೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ಈ ವೇಳೆ ಎಪಿಎಂಸಿ ಕಾಯ್ದೆ ಅನ್ವಯ ಕ್ರಮವಹಿಸಲು ಕಾರ್ಯದರ್ಶಿ ಶ್ರೀಧರ್ ಅವರಿಗೆ ಶಾಸಕರು ಸೂಚನೆ ನೀಡಿದರು.

ಇದಕ್ಕೂ ಮೊದಲು ಬೇಗೂರಿನಲ್ಲಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ಕಾಮಗಾರಿಯನ್ನು ಶಾಸಕ ಗಣೇಶಪ್ರಸಾದ್ ಪರಿಶೀಲನೆ ನಡೆಸಿ, ಗುಣಮಟ್ಟದಿಂದ ನಡೆಸಿ ಶೀಘ್ರ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಎಪಿಎಂಸಿ ಅಧ್ಯಕ್ಷ ರಂಗೂಪುರ ನಾಗರಾಜು, ಉಪಾಧ್ಯಕ್ಷ ರಾಜು, ನಿರ್ದೇಶಕರಾದ ಮೊಳ್ಳಯ್ಯನಹುಂಡಿ ಬಸವರಾಜು, ವೀರೂಪಾಕ್ಷ, ಕಮರಹಳ್ಳಿ ರವಿ, ಅರಸಶೆಟ್ಟಿ, ವರ್ತಕರ ಪ್ರತಿನಿಧಿ ಮಾಡ್ರಹಳ್ಳಿ ಮಹದೇವಪ್ಪ, ಎಪಿಎಂಸಿ ಕಾರ್ಯದರ್ಶಿ ಶ್ರೀಧರ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ತಾ.ಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮಧುಶಂಕರ್, ಜಿ.ಪಂ ಮಾಜಿ ಸದಸ್ಯ ಹೊರೆಯಾಲ ಶಿವಸ್ವಾಮಿ, ಮಡಹಳ್ಳಿ ಮಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.