ಗುಂಡ್ಲುಪೇಟೆ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಅ.2ರ ಗಾಂಧಿ ಜಯಂತಿಯಂದು ನಿಷೇಧವಿದ್ದರೂ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲೀಕರಿಗೆ ಪುರಸಭೆ ಅಧಿಕಾರಿ ದಂಡ ವಿಧಿಸಿ, ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.
ಸರ್ಕಾರದ ಆದೇಶದಂತೆ ಪುರಸಭೆ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಅ.2ರಂದು ಪ್ರಾಣಿ ವಧೆ ಮತ್ತು ಮಾರಾಟ ಮಾಡಬಾರದು ಎಂದು ಮಾಂಸದಂಗಡಿಗಳಿಗೆ ಸೂಚನೆ ನೀಡಲಾಗಿತ್ತು. ಪಟ್ಟಣದ ಇಸಾಕ್ ಪಾಷಾ ಎಂಬುವರು ಪುರಸಭೆಯ ಆದೇಶ ಉಲ್ಲಂಘಿಸಿ ಮಾರಾಟ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕರಿಂದ ದೂರು ಬಂದಿದ್ದರಿಂದ ಅಧಿಕಾರಿಗಳು ಶುಕ್ರವಾರ ಅಂಗಡಿಗೆ ಭೇಟಿ ನೀಡಿ ₹1 ಸಾವಿರ ದಂಡ ವಿಧಿಸಿ, ಒಂದು ದಿನ ಅವಧಿಗೆ ಅಂಗಡಿಯನ್ನು ಮುಚ್ಚಿಸಿದ್ದಾರೆ. ಘಟನೆ ಮರಕಳಿಸಿದಂತೆ ಮುಚ್ಚಳಿಕೆ ಪತ್ರ ಪಡೆದಿದ್ದಾರೆ. ಕೃತ್ಯ ಪುನರಾವರೆ್ತಿಸಿದರೆ ಉದ್ಯಮ ಪರವಾನಗಿ ರದ್ದು ಪಡಿಸಲಾಗವುದು ಎಂದು ಪುರಸಭೆ ಮುಖ್ಯಾಧಿಕಾರಿ ಶರವಣ ಎಚ್ಚರಿಕೆ ನೀಡಿದ್ದಾರೆ.
ಪುರಸಭೆ ಅಧಿಕಾರಿಗಳಾದ ಪರಮೇಶ್ವರಪ್ಪ, ಮಹೇಶ್ , ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.