
ಗುಂಡ್ಲುಪೇಟೆ: ಪಟ್ಟಣದ ಪುರಸಭೆ ವ್ಯಾಪ್ತಿಯ ಕೆಆರ್‌ಸಿ ರಸ್ತೆಯಲ್ಲಿ ಪಾದಚಾರಿ ಮಾರ್ಗ ಹಾಗೂ ರಸ್ತೆಯಲ್ಲಿ ಸಾಮಗ್ರಿ ಇಟ್ಟುಕೊಂಡಿರುವ ಅಂಗಡಿ ಮಾಲೀಕರಿಗೆ ತೆರವುಗೊಳಿಸುವಂತೆ ಎಚ್ಚರಿಕೆ ನೀಡಲಾಯಿತು.
ವ್ಯಾಪಾರ ನಡೆಸುವವರು ತಮ್ಮ ಅಂಗಡಿಯ ಸಾಮಗ್ರಿಗಳನ್ನು ಅಂಗಡಿಯಿಂದ ಹೊರಗೆ ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವುದರಿಂದ ಪಾದ ಚಾರಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸಾರ್ವಜನಿಕರಿಗೆ ಓಡಾಡಲು ಸಹ ತೊಂದರೆಯಾಗುತ್ತಿದೆ. ಆದ್ದರಿಂದ ಸಾಮಗ್ರಿಗಳನ್ನು ಅಂಗಡಿ ಒಳಗೆ ಇಟ್ಟುಕೊಂಡು ಮಾರಾಟ ಮಾಡುವಂತೆ ಸೂಚನೆ ನೀಡಲಾಯಿತು.
ಅಂಗಡಿಯವರಿಂದ ಜನರಿಗೆ ತೊಂದರೆಯಾದರೆ ಕರ್ನಾಟಕ ಪುರಸಭೆ ಕಾಯಿದೆ 1964 ನಿಯಮ 256 ಪ್ರಕಾರ ಉದ್ಯಮ ಪರವಾಗಿ ರದ್ದುಪಡಿಸಿ ಸಾಮಗ್ರಿಗಳನ್ನು ಕಚೇರಿ ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕರಾದ ಸುಷ್ಮಾ, ಮೇಸ್ತ್ರಿಗಳಾದ ಮೂರ್ತಿ, ಸಿದ್ದರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.