ADVERTISEMENT

ಗುಂಡ್ಲುಪೇಟೆ |ವೇಶ್ಯಾವಾಟಿಕೆ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 7:56 IST
Last Updated 28 ಜನವರಿ 2026, 7:56 IST
<div class="paragraphs"><p>ಬಂಧನ</p></div>

ಬಂಧನ

   

ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೊನಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ಮಾಡಿ ಮೂವರು ಪುರುಷರನ್ನು ಬಂಧಿಸಿ, ಮಹಿಳೆಯನ್ನು ರಕ್ಷಿಸಿದ್ದಾರೆ.

ಮನೆ ಮಾಲೀಕ ರವಿ(58) ಹಾಗೂ ಇಬ್ಬರು ಪುರುಷರನ್ನು ಬಂಧಿಸಲಾಗಿದ್ದು, ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ಪಿಐ ಎನ್‌. ಜಯಕುಮಾರ್ ಮತ್ತು ಪಿಎಸ್ಐ ನರೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿದ ವೇಳೆ, ಕೊಠಡಿಯಲ್ಲಿ ಇಬ್ಬರು ಪುರುಷರು ಹಾಗೂ ಮಹಿಳೆ ಇದ್ದರು. ಕಾಂಡೋಮ್ ಪ್ಯಾಕ್‌ಗಳು, ನಾಲ್ಕು ಬೈಕ್, ₹4,300 ನಗದನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.