
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ಚೇತನ ಫೌಂಡೇಶನ್ ಧಾರವಾಡ ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಕಾಸರಗೋಡು ಸಂಯುಕ್ತ ಆಶ್ರಯದಲ್ಲಿ ನಡೆದ ಜನ ಗಣ ಮನ ಕಾರ್ಯಕ್ರಮದಡಿಯಲ್ಲಿ ದೇಶದ ಹಾಗೂ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ
ಗುಂಡ್ಲುಪೇಟೆ: ತಾಲ್ಲೂಕಿನ ಹುಂಡಿಪುರ ಸರ್ಕಾರಿ ಪ್ರೌಢಶಾಲೆಯ ಭೌತವಿಜ್ಞಾನ ಶಿಕ್ಷಕ ವೆಂಕಟೇಶ್ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ಚೇತನ ಫೌಂಡೇಶನ್ ಧಾರವಾಡ ಹಾಗೂ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ಕಾಸರಗೋಡು ಸಂಯುಕ್ತ ಆಶ್ರಯದಲ್ಲಿ ನಡೆದ ಜನ ಗಣ ಮನ ಕಾರ್ಯಕ್ರಮದಡಿಯಲ್ಲಿ ದೇಶದ ಹಾಗೂ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ನೀಡಲಾಗುವ ಭಾರತ ಭೂಷಣ ರಾಷ್ಟ್ರೀಯ ಪ್ರಶಸ್ತಿಯನ್ನು ವೆಂಕಟೇಶ್ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.
ಭೌತವಿಜ್ಞಾನ ಶಿಕ್ಷಕ ವೆಂಕಟೇಶ್ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ. ಜೊತೆಗೆ ಶಿಕ್ಷಕರ ವೈಯಕ್ತಿಕ ವಿಭಾಗದಲ್ಲೂ ವಿಜ್ಞಾನ ಮತ್ತು ತಂತ್ರಜ್ಞಾನ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದಾರೆ. ಇವರ ಸಾಮಾಜಿಕ ಮತ್ತು ಶೈಕ್ಷಣಿಕ ಸೇವೆಯನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.