
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಮೂಡುಗೂರು ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ಹುಲಿ ದಾಳಿ ನಡೆಸಿ ಎರಡು ಹಸುಗಳನ್ನು ಕೊಂದು ಹಾಕಿದೆ.
ಮೂಡುಗೂರು ಗ್ರಾಮದ ಸಿದ್ದೇಶ್ ಅವರಿಗೆ ಸೇರಿದ ಎರಡು ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಗ್ರಾಮದ ಬಾಣನಕೆರೆ ಏರಿ ಮೇಲೆ ಹಸುಗಳನ್ನು ಮೇಯಿಸುತ್ತಿದ್ದಾಗ ಏಕಾಏಕಿ ಹುಲಿ ದಾಳಿ ಮಾಡಿದ್ದು, ಎರಡು ಹಸುಗಳ ಕುತ್ತಿಗೆಗೂ ಬಾಯಿ ಹಾಕಿ ರಕ್ತ ಹೀರಿ ಕೊಂದಿದೆ. ಹುಲಿ ದಾಲಿ ಮಾಡುತ್ತಿದ್ದಂತೆ ಸುತ್ತಮುತ್ತಲು ರೈತರು ಕೂಗಾಡಿದ್ದರಿಂದ ಹಸುಗಳನ್ನು ಬಿಟ್ಟು ಹುಲಿ ಓಡಿ ಹೋಗಿದ್ದು. ಹಗಲಿನ ವೇಳೆಯೇ ಹುಲಿ ದಾಳಿ ಮಾಡಿದ್ದನ್ನು ಕಂಡ ರೈತರು ಬೆಚ್ಚಿ ಬಿದ್ದಿದ್ದಾರೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ವ್ಯಾಪ್ತಿಯ ಅರಣ್ಯಾಧಿಕಾರಿಗಳು ಮೂಡುಗೂರು ಗ್ರಾಮದ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಚಿರತೆ ಮತ್ತು ಹುಲಿ ಓಡಾಟ ಇತ್ತೀಚೆಗೆ ಹೆಚ್ಚಾಗಿದ್ದು, ಹುಲಿ ಮತ್ತು ಚಿರತೆಗಳನ್ನು ಕೂಡಲೇ ಸೆರೆ ಹಿಡಿಯಬೇಕು.ತೆಗೆ, ಹಸು ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ಕೊಡಬೇಕೆಂದು ಸ್ಥಳೀಯ ರೈತ ಮುಖಂಡರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.