ADVERTISEMENT

ಗುಂಡ್ಲುಪೇಟೆ: ಪುರಸಭೆ ಅಧ್ಯಕ್ಷರಾಗಿ ಶಶಿಧರ್, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 6:01 IST
Last Updated 23 ಸೆಪ್ಟೆಂಬರ್ 2025, 6:01 IST
ಗುಂಡ್ಲುಪೇಟೆ ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಶಿಧರ್ ಪಿ.ದೀಪು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಕಣ್ಣಪ್ಪ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಶುಭ ಕೋರಿದರು 
ಗುಂಡ್ಲುಪೇಟೆ ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಶಿಧರ್ ಪಿ.ದೀಪು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಕಣ್ಣಪ್ಪ ಅವಿರೋಧವಾಗಿ ಆಯ್ಕೆಯಾಗುತ್ತಿದ್ದಂತೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಶುಭ ಕೋರಿದರು    

ಗುಂಡ್ಲುಪೇಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಶಶಿಧರ್ ಪಿ.ದೀಪು, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಕಣ್ಣಪ್ಪ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಪುರಸಭಾ ಕಾರ್ಯಾಲಯದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪಿ.ದೀಪು, ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸ್ ಕಣ್ಣಪ್ಪ ಹೊರತು ಪಡಿಸಿ ಇತರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿಯಾಗಿದ್ದ ತಹಶೀಲ್ದಾರ್ ತನ್ಮಯ್ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಣೆ ಮಾಡಿದರು. 10ನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡರು ಹಾಗೂ ಬೆಂಬಲಿಗರು ಬೃಹತ್ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಾತನಾಡಿ, ‘ಪಟ್ಟಣ ಪುರಸಭೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಬೇಕಿದೆ. ಕಾಲಾವಕಾಶ ಕಡಿಮೆ ಇರುವ ಕಾರಣ ಶಕ್ತಿ ಮೀರಿ ಕೆಲಸ ಮಾಡುತ್ತೇವೆ. ಪುರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಪಟ್ಟಣದ ರಸ್ತೆಗಳನ್ನು ದುರಸ್ತಿ ಪಡಿಸಲಾಗುವುದು’ ಎಂದು ಹೇಳಿದರು.

ADVERTISEMENT

‘ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ₹50 ಕೋಟಿ ಹಣದಲ್ಲಿ ಪುರಸಭೆಗೆ ಐದು ಕೋಟಿ ಅನುದಾನ ನೀಡಲಾಗುವುದು. ಇದರಲ್ಲಿ ಪಟ್ಟಣದ ಪ್ರಮುಖ ಮೂರು ರಸ್ತೆಗಳನ್ನು ಸರಿಪಡಿಸಲಾಗುವುದು ಹಾಗೂ ವಾಲ್ಮೀಕಿ ಭವನದ ರಸ್ತೆಗೆ ಎರಡು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದರು.

ಪುರಸಭೆ ನೂತನ ಅಧ್ಯಕ್ಷ ಶಶಿಧರ್ ಪಿ.ದೀಪು ಮಾತನಾಡಿ, ಶಾಸಕ ಗಣೇಶಪ್ರಸಾದ್ ಮತ್ತು ಪುರಸಭಾ ಸದಸ್ಯರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಪುರಸಭಾ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಮಧುಸೂದನ್, ಪಿ.ಗಿರೀಶ್, ಅಣ್ಣಯ್ಯಸ್ವಾಮಿ, ಮಹಮ್ಮದ್ ಇಲಿಯಾಸ್, ಎನ್.ಕುಮಾರ್, ರಾಜಗೋಪಾಲ್, ರಂಗಸ್ವಾಮಿ, ಎಸ್.ಕುಮಾರ್, ಕಾಂಗ್ರೆಸ್ ಮುಖಂಡರಾದ ಕಬ್ಬಹಳ್ಳಿ ಮಹೇಶ್, ಸುರೇಶ್ ಕಾರ್ಗಳ್ಳಿ, ಮಾಧು, ರಾಮು, ಕರಕಲಮಾದಹಳ್ಳಿ ಪ್ರಭು, ಬಿ.ಜಿ.ಶಿವಕುಮಾರ್, ಗೋಪಾಲಪುರ ಲೋಕೇಶ್, ಮಡಹಳ್ಳಿ ಮಣಿ, ಮಧು, ಗಿರೀಶ್ ಲಕ್ಕೂರು ಸೇರಿದಂತೆ ದಾಸ ಬಣಜಿಗ ಯುವಕರಾದ ನಾಗೇಂದ್ರ ಜಿ ವೆಂಕಟೇಶ್, ತಾರಾ, ನಾಗೇಂದ್ರ, ಪುರಿ ಪ್ರದೀಪ್, ದರ್ಶನ್, ಶಂಕರ್ ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.