ADVERTISEMENT

ಗುಂಡ್ಲುಪೇಟೆ: ಸುಗ್ಗಿ ಹಬ್ಬ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 5:48 IST
Last Updated 15 ಜನವರಿ 2026, 5:48 IST
ಗುಂಡ್ಲುಪೇಟೆ ಪಟ್ಟಣದ ಸ್ಮಾರ್ಟ್ ಶಾಲೆಯಲ್ಲಿ ಸಂಕ್ರಾಂತಿ ಸುಗ್ಗಿ ಹಬ್ಬ ಸಂಭ್ರಮ ಕಾರ್ಯಕ್ರಮ ನಡೆಯಿತು
ಗುಂಡ್ಲುಪೇಟೆ ಪಟ್ಟಣದ ಸ್ಮಾರ್ಟ್ ಶಾಲೆಯಲ್ಲಿ ಸಂಕ್ರಾಂತಿ ಸುಗ್ಗಿ ಹಬ್ಬ ಸಂಭ್ರಮ ಕಾರ್ಯಕ್ರಮ ನಡೆಯಿತು   

ಗುಂಡ್ಲುಪೇಟೆ: ಪಟ್ಟಣದ ಸ್ಮಾರ್ಟ್ ಶಾಲೆಯಲ್ಲಿ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಸುಗ್ಗಿ ಹಬ್ಬ ಸಂಭ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸ್ಮಾರ್ಟ್ ಶಾಲೆ ಅಧ್ಯಕ್ಷ ಗೋಪಿಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಯಲ್ಲಿ ಸುಗ್ಗಿ ಹಬ್ಬ ಆಚರಣೆ ಮಾಡುತ್ತಿರುವ ಖುಷಿಯ ವಿಚಾರವಾಗಿದ್ದು, ಎಳ್ಳು-ಬೆಲ್ಲ ತಿಂದು ಒಳ್ಳೆಯದು ಮಾತನಾಡಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಪ್ರಾಂಶುಪಾಲರು ಸಂಕ್ರಾಂತಿ ಹಬ್ಬದ ಮಹತ್ವ ವಿವರಿಸಿದರು. ನಂತರ ವಿದ್ಯಾರ್ಥಿಗಳು ಹಬ್ಬದ ಕುರಿತು ಭಾಷಣ ಮಾಡಿದರು. ಕವನ ವಾಚನ ಹಾಗೂ ನಾಟಕ ಪ್ರದರ್ಶನ ನಡೆಯಿತು.  ಜೊತೆಗೆ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿ, ಕನ್ನಡ ಸಂಸ್ಕೃತಿಯನ್ನು ಬಿಂಬಿಸಿದರು.

ADVERTISEMENT

ಶಾಲಾ ಆವರಣದಲ್ಲಿ ಬಣ್ಣಬಣ್ಣದ ರಂಗೋಲಿ ಹಾಕಲಾಗಿತ್ತು. ಎಳ್ಳು-ಬೆಲ್ಲ ಹಂಚುವ ಕಾರ್ಯಕ್ರಮವೂ ನಡೆಯಿತು. ಕೆಲ ವಿದ್ಯಾರ್ಥಿಗಳು ಸಂಕ್ರಾಂತಿ ಹಬ್ಬಕ್ಕೆ ಸಂಬಂಧಿಸಿದ ಜನಪದ ಹಾಡುಗಳು ಮತ್ತು ನೃತ್ಯಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಪಡೆದರು.

ಈ ಸಂದರ್ಭದಲ್ಲಿ ಶಾಲೆ ಅಧ್ಯಕ್ಷ ರಾಜೇಶ್, ಉಪಾಧ್ಯಕ್ಷ ಶ್ರೀಕಾಂತ, ಕಾರ್ಯದರ್ಶಿ ಶಿವಾನಂದ ಸ್ವಾಮಿ ಸೇರಿದಂತೆ ಶಿಕ್ಷಕರು, ಮಕ್ಕಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.