ADVERTISEMENT

ಸದಸ್ಯರು ಹಾಗೂ ಸಿಬ್ಬಂದಿ ಶ್ರಮದಾನ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 4:26 IST
Last Updated 3 ಅಕ್ಟೋಬರ್ 2025, 4:26 IST
ಗುಂಡ್ಲುಪೇಟೆ ಪಟ್ಟಣದಲ್ಲಿ ಮಹಾತ್ಮ ಗಾಂಧೀಜಿ ಅವರ ಜಯಂತಿ ಪ್ರಯುಕ್ತ ಪುರಸಭೆ ಅಧ್ಯಕ್ಷ ಶಶಿಧರ್ ದೀಪು ಹಾಗೂ ಪುರಸಭೆ ಮುಖ್ಯಾಧಿಕಾರಿ ಶರವಣ ನೇತೃತ್ವದಲ್ಲಿ ಸಿಬ್ಬಂದಿ ಶ್ರಮದಾನ ಮಾಡಿದರು.
ಗುಂಡ್ಲುಪೇಟೆ ಪಟ್ಟಣದಲ್ಲಿ ಮಹಾತ್ಮ ಗಾಂಧೀಜಿ ಅವರ ಜಯಂತಿ ಪ್ರಯುಕ್ತ ಪುರಸಭೆ ಅಧ್ಯಕ್ಷ ಶಶಿಧರ್ ದೀಪು ಹಾಗೂ ಪುರಸಭೆ ಮುಖ್ಯಾಧಿಕಾರಿ ಶರವಣ ನೇತೃತ್ವದಲ್ಲಿ ಸಿಬ್ಬಂದಿ ಶ್ರಮದಾನ ಮಾಡಿದರು.   

ಗುಂಡ್ಲುಪೇಟೆ: ಪಟ್ಟಣದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಪ್ರಯುಕ್ತ ಪುರಸಭೆ ಅಧ್ಯಕ್ಷ ಶಶಿಧರ್ ದೀಪು ಹಾಗೂ ಪುರಸಭೆ ಮುಖ್ಯಾಧಿಕಾರಿ ಶರವಣ ನೇತೃತ್ವದಲ್ಲಿ ಸದಸ್ಯರು ಹಾಗೂ ಸಿಬ್ಬಂದಿ ಶ್ರಮದಾನ ಮಾಡಿದರು.

ಪಟ್ಟಣದ 23ನೇ ವಾರ್ಡ್ ನ ಬೀಡಿ ಕಾಲೋನಿಯ ಉದ್ಯಾನವನದಲ್ಲಿ ಗಿಡಗಂಟಿ ತೆರವುಗೊಳಿಸಿ, ಬಿಸಾಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಲಾಯಿತು. ಬಳಿಕ, ಮಹಾತ್ಮ ಗಾಂಧೀಜಿ ನೆನಪಿನಲ್ಲಿ ಗಿಡಗಳನ್ನು ನೆಟ್ಟು ನೀರೆದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಶರವಣ ಮಾತನಾಡಿ, ಗಾಂಧೀಜಿಯವ ತತ್ವಗಳಲ್ಲಿ ಸ್ವಚ್ಛತೆಯೇ ದೇವರು ಎಂಬುದಾಗಿದೆ. ವೈಯಕ್ತಿಕ ಹಾಗೂ ಪರಿಸರದ ಸ್ವಚ್ಛತೆಯತ್ತ ಪ್ರತಿಯೊಬ್ಬರು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಈ ವೇಳೆ ಪುರಸಭೆ ಅಧ್ಯಕ್ಷ ಶಶಿಧರ್ ಪಿ.ದೀಪು, ಉಪಾಧ್ಯಕ್ಷ ಶ್ರೀನಿವಾಸ್ ಕಣ್ಣಪ್ಪ, ಸದಸ್ಯರಾದ ಅಣ್ಣಯ್ಯಸ್ವಾಮಿ, ಎನ್.ಕುಮಾರ್, ಪುರಸಭೆ ಅಧಿಕಾರಿಗಳಾದ ಪರಮೇಶ್ವರಪ್ಪ, ಮಹೇಶ್ ಸೇರಿದಂತೆ ಹಲವು ಮಂದಿ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಹಾಜರಿದ್ದರು.

ಸುರಕ್ಷತ ಕಿಟ್ ವಿತರಣೆ: ಪಟ್ಟಣ ಪುರಸಭೆ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ 156ನೇ ಜಯಂತಿ ಆಚರಿಸಿ, ಒಳಚರಂಡಿ ಕಾರ್ಮಿಕರಿಗೆ ಸುರಕ್ಷತ ಕಿಟ್ ವಿತರಣೆಗಳನ್ನು ಪುರಸಭೆ ಅಧ್ಯಕ್ಷ ಶಶಿಧರ್ ಪಿ.ದೀಪು ವಿತರಣೆ ಮಾಡಿದರು.

ಈ ವೇಳೆ ಮಾತನಾಡಿದ ಪುರಸಭೆ ಅಧ್ಯಕ್ಷ ಶಶಿಧರ್ ಪಿ.ದೀಪು, ಮಹಾತ್ಮ ಗಾಂಧೀಜಿ ಸಂದೇಶಗಳಾದ ಸ್ವಚ್ಛತೆ, ಸಹಬಾಳ್ವೆಯನ್ನು ಪ್ರತಿಯೊಬ್ಬರು ಅನುಸರಿಸಬೇಕು. ಸದಾ ಕಾಲಕ್ಕೂ ಗಾಂಧೀಜಿ ಅವರ ಆದರ್ಶಗಳು ಬೆಳಕಿನ ದೀಪಗಳು ಎಂದು ಬಣ್ಣಿಸಿ, ಒಳಚರಂಡಿ ಕಾರ್ಮಿಕರಿಗೆ ಸುರಕ್ಷತೆ ದೃಷ್ಟಿಯಿಂದ ವಿವಿಧ ಸಲಕರಣೆಗಳುಳ್ಳ ಕಿಟ್ ವಿತರಣೆ ಮಾಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶ್ರೀನಿವಾಸ್ ಕಣ್ಣಪ್ಪ, ಮಾಜಿ ಅಧ್ಯಕ್ಷ ಮಧುಸೂಧನ್, ಅಣ್ಣಯ್ಯಸ್ವಾಮಿ, ಎನ್.ಕುಮಾರ್, ಮಹದೇವಮ್ಮ, ಮುಖಂಡರಾದ ಸುರೇಶ್ ಕಾರ್ಗಳ್ಳಿ ಸೇರಿದಂತೆ ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಗುಂಡ್ಲುಪೇಟೆ ಪಟ್ಟಣ ಪುರಸಭೆ ಕಾರ್ಯಾಲಯದಲ್ಲಿ ಒಳಚರಂಡಿ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.