ಸಾವು
ಪ್ರಾತಿನಿಧಿಕ ಚಿತ್ರ
ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರರಾದ ಬೆಂಗಳೂರಿನ ಪ್ರದೀಪ್(20), ನೆಲಮಂಗಲದ ಭಾವೀಶ್(21) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇವರು ಬೈಕ್‌ನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು. ತಾಳಬೆಟ್ಟ ಬಳಿ ಬೆಟ್ಟದಿಂದ ಬರುತ್ತಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಹಿಂಬದಿ ಸವಾರ ಪ್ರದೀಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಭಾವೀಶ್ ಆಸ್ಪತ್ರೆಯ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.