ADVERTISEMENT

ಹನೂರು: ಟಿಬೆಟನ್‌ ಮಹಿಳೆಯರಿಂದ ರಕ್ಷಾ ಬಂಧನ ಆಚರಣೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 7:47 IST
Last Updated 12 ಆಗಸ್ಟ್ 2025, 7:47 IST
ಹನೂರು ತಾಲ್ಲೂಕಿನ ಒಡೆಯರಪಾಳ್ಯ ಬಳಿಯ ಟಿಬೆಟನ್‌ ಕ್ಯಾಂಪಿನ ಮಹಿಳೆಯರು ಸೋಮವಾರ ಪಟ್ಟಣದ ಪೊಲೀಸ್ ಠಾಣೆ ಸಿಬ್ಬಂದಿಗೆ ರಾಖಿ ಕಟ್ಟಿ ರಕ್ಷಾಬಂಧನ ಹಬ್ಬದ ಶುಭಾಶಯ ತಿಳಿಸಿದರು
ಹನೂರು ತಾಲ್ಲೂಕಿನ ಒಡೆಯರಪಾಳ್ಯ ಬಳಿಯ ಟಿಬೆಟನ್‌ ಕ್ಯಾಂಪಿನ ಮಹಿಳೆಯರು ಸೋಮವಾರ ಪಟ್ಟಣದ ಪೊಲೀಸ್ ಠಾಣೆ ಸಿಬ್ಬಂದಿಗೆ ರಾಖಿ ಕಟ್ಟಿ ರಕ್ಷಾಬಂಧನ ಹಬ್ಬದ ಶುಭಾಶಯ ತಿಳಿಸಿದರು   

ಹನೂರು: ತಾಲ್ಲೂಕಿನ ಒಡೆಯರಪಾಳ್ಯ ಬಳಿಯ ಟಿಬೆಟನ್‌ ಕ್ಯಾಂಪಿನ ಮಹಿಳೆಯರು ಸೋಮವಾರ ಪಟ್ಟಣದ ಪೊಲೀಸ್ ಠಾಣೆ ಸಿಬ್ಬಂದಿಗೆ ರಾಖಿ ಕಟ್ಟಿ ರಕ್ಷಾಬಂಧನ ಹಬ್ಬದ ಶುಭಾಶಯ ಕೋರಿದರು.

ಠಾಣೆಗೆ ಆಗಮಿಸಿದ ಟಿಬೆಟನ್‌ ಮಹಿಳೆಯರು ಇನ್‌ಸ್ಪೆಕ್ಟರ್ ಆನಂದಮೂರ್ತಿ, ಪಿಎಸ್ಐ ಮಂಜುನಾಥ್ ಪ್ರಸಾದ್ ಹಾಗೂ ಸಿಬ್ಬಂದಿಗೆ ರಾಖಿ ಕಟ್ಟಿ ಆಶೀರ್ವಾದ ಪಡೆದುಕೊಂಡರು.

ಇನ್‌ಸ್ಪೆಕ್ಟರ್ ಆನಂದಮೂರ್ತಿ ಮಾತನಾಡಿ, ‘ಐದು ದಶಕಗಳ ಹಿಂದೆ ನಿರಾಶ್ರಿತರಾಗಿ ಬಂದ ಟಿಬೆಟಿಯನ್ನರು ಇಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ಸ್ಥಳೀಯರ ಜೊತೆ ಸೌಹಾರ್ದ ಜೀವನ ನಡೆಸುವ ಮೂಲಕ ತಮ್ಮ ಸಂಸ್ಕೃತಿ ಜೊತೆಗೆ ಇಲ್ಲಿನ ಆಚಾರ, ವಿಚಾರ, ಸಂಪ್ರದಾಯಗಳನ್ನು ಮೈಗೂಡಿಸಿಕೊಂಡಿದ್ದಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.