
ಹನೂರು : ಬೆಳೆ ಹಾನಿ, ಗ್ರಾಮಸ್ಥರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಕಾಡಾನೆಯನ್ನು ಸೆರೆಹಿಡಿದು, ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ನಿವಾಸಿಗರು ಬೈಲೂರು ವಲಯ ಅರಣ್ಯಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.
ತಾಲ್ಲೂಕಿನ ಹುಣಸೆ ಪಾಳ್ಯ, ಮುನಿ ಗುಡಿದೊಡ್ಡಿ,ಕಾನುಮೇಳ ದೊಡ್ಡಿ,ಕರಿಯಪ್ಪನದೊಡ್ಡಿ ಗ್ರಾಮಸ್ಥರು ವಲಯ ಅರಣ್ಯಾಧಿಕಾರಿ ಕಚೇರಿಗೆ ಬಂದು, ‘ ಕಾಡಾನೆಯೊಂದು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದೆ. ಎರಡು ದಿನಗಳ ಹಿಂದೆ ರೈಲ್ವೆ ಬ್ಯಾರಿಕೆಡ್ ಮುರಿದು ಹಾಕಿದೆ. ತಡರಾತ್ರಿ ಮುನಿಗುಡಿ ದೊಡ್ಡಿ ಗ್ರಾಮದಲ್ಲಿ ರೈತ ಪ್ರಭುಸ್ವಾಮಿ ಎಂಬವರ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದಾರೆ. ಈ ಕಾಡಾನೆಯನ್ನು ಹಿಡಿದು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿದರು.
ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಮಾತನಾಡಿ, ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಲು ಕ್ರಮ ವಹಿಸುತ್ತೇವೆ. ಗುರುವಾರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದರು. ಸದಾನಂದ ಸ್ವಾಮಿ,ರವಿ, ಚಿಕ್ಕಮಾದ, ಸತೀಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.