
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ಸಂಚಾರ ಠಾಣೆಯಲ್ಲಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಸವಾರನಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹೆಡ್ ಕಾನ್‌ಸ್ಟೆಬಲ್ ಮಲ್ಲು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಂಚಾರ ಠಾಣೆಯಲ್ಲಿ ಇರಿಸಿಕೊಳ್ಳಲಾಗಿದ್ದ ಬೈಕ್ ಬಿಡಿಸಿಕೊಳ್ಳಲು ವಾಹನ ಮಾಲೀಕರಿಗೆ ₹ 3,000ಕ್ಕೆ ಬೇಡಿಕೆ ಇರಿಸಲಾಗಿತ್ತು. ಈ ಸಂಬಂಧ ದೂರುದಾರ ಹರದನಹಳ್ಳಿಯ ಪ್ರತಾಪ್ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು. ಶುಕ್ರವಾರ ಸಂಜೆ ದೂರುದಾರ ಹಣ ನೀಡುವಾಗ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ಹೆಡ್ ಕಾನ್‌ಸ್ಟೆಬಲ್‌ನನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.