ADVERTISEMENT

ಗುಂಡ್ಲುಪೇಟೆ: ಹೃದಯಘಾತ ಸಾವು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 7:38 IST
Last Updated 8 ಫೆಬ್ರುವರಿ 2026, 7:38 IST
ದದ
ದದ   

ಗುಂಡ್ಲುಪೇಟೆ: ಪಟ್ಟಣದ ಹೊರ ವಲಯದಲ್ಲಿ ಶುಕ್ರವಾರ ನಡೆದ ಮುಸ್ಲಿಂ ಸಮುದಾಯದ ಇಜ್ತೆಮಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವ್ಯಕ್ತಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೋಯ್ಯುವ ಮಾರ್ಗದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ತಾಲ್ಲೂಕಿನ ಭೀಮನಬೀಡು ಗ್ರಾಮ ನಿವಾಸಿ, ಪಟ್ಟಣದ ಕೋಡಹಳ್ಳಿ ಸರ್ಕಲ್ ಬಳಿ ವಾಸವಿದ್ದ ಮುಖ್ತಾರ್ ಅಹಮದ್ ಅಲಿಯಾಸ್ ಯೂಸುಫ್ (32) ಮೃತ ವ್ಯಕ್ತಿ.

ಪಟ್ಟಣದ ಎಪಿಎಂಸಿ ಮಾರ್ಕೆಟ್ ನಲ್ಲಿ ಮಂಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಮೃತ ವ್ಯಕ್ತಿ ಶುಕ್ರವಾರ ಕೆಲಸಕ್ಕೆ ರಜೆ ನೀಡಿ ಇಜ್ತೆಮಾ ದಲ್ಲಿ ಪಾಲ್ಗೊಂಡಿದ್ದರು. ಸ್ನೇಹಿತರೊಂದಿಗೆ ಸಂಭ್ರಮದಿಂದ ಕಾಲ ಕಳೆಯುತ್ತಿದ್ದ ಇವರಿಗೆ ಎದೆ ನೋವು ಕಾಣಿಸಿಕೊಂಡಿತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಇವರನ್ನು ಪರೀಕ್ಷಿಸಿದ ವೈದ್ಯರು ಹೃದಯಘಾತದಿಂದ ಮೃತಪಟ್ಟಿರುವುದನ್ನು ಧೃಡಪಡಿಸಿದರು ಎಂದು ತಿಳಿದು ಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.