ಚಾಮರಾಜನಗರ: ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಸೋಮವಾರ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.ಪದವಿಯವರೆಗಿನ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಾದ್ಯಂತ ಸೋಮವಾರ ಮುಂಜಾನೆಯಿಂದ ಧಾರಾಕಾರ ಮಳೆಯಾಗುತ್ತಿದೆ. ಭಾನುವಾರ ರಾತ್ರಿಯಿಂದಲೇಸಾಧಾರಣ ಮಳೆಯಾಗುತ್ತಿದ್ದು, ಬೆಳಿಗ್ಗೆ 7 ಗಂಟೆಯ ನಂತರ ಮಳೆ ಬಿರುಸು ಪಡೆದಿದೆ.
ಜಿಲ್ಲೆಯ ಬಹುತೇಕ ಕೆರೆಕಟ್ಟೆಗಳು ಭರ್ತಿಯಾಗಿ ಕೋಡಿ ಬಿದ್ದಿದ್ದು, ಕೃಷಿ ಜಮೀನುಗಳಿಗೆ ನೀರು ನುಗ್ಗುತ್ತಿವೆ. ಎರಡು ದಿನಗಳ ಹಿಂದೆ ಸುರಿದ ಮಳೆಗೆ ಕಬಿನಿ ನಾಲೆ ಹಾಗೂ ಸುವರ್ಣಾವತಿ ನದಿ ಉಕ್ಕಿ ಹರಿದ ಪರಿಣಾಮ ಯಳಂದೂರು ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕೃಷಿ ಜಮೀನುಗಳು ಜಲಾವೃತವಾಗಿದ್ದವು.
ಭಾನುವಾರ ದಿನಪೂರ್ತಿ ಮಳೆಯಾಗದೇ ಇದ್ದುದರಿಂದ ನೀರಿನ ಮಟ್ಟ ಇಳಿದಿತ್ತು. ರಾತ್ರಿಯಿಂದ ಮತ್ತೆ ಮಳೆಯಾಗುತ್ತಿರುವುದರಿಂದ ಮತ್ತೆ ನೆರೆ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.