ಚಾಮರಾಜನಗರ: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯಿಂದ ಶನಿವಾರ ನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮುಖಂಡ ಕುಲಗಾಣ ಶಾಂತಮೂರ್ತಿ ಮಾತನಾಡಿ, ಗಣಪತಿ ಉತ್ಸವ ಹಾಗೂ ಹಿಂದೂ ನಾಯಕರ ಜಯಂತಿಗಳ ಮೆರವಣಿಗೆಯಲ್ಲಿ ಕಲ್ಲು, ಚಪ್ಪಲಿ ತೂರಾಟ ನಡೆಸುತ್ತಿರುವುದು ಖಂಡನೀಯ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಅಹಿತಕರ ಘಟನೆಗಳು ಹೆಚ್ಚಾಗಿವೆ. ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಬಹುಸಂಖ್ಯಾತ ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ. ಹಿಂದೂಗಳ ಧಾರ್ಮಿಕ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲಾಗುತ್ತಿದೆ ಎಂದು ದೂರಿದರು.
ಕಲ್ಲು ತೂರುವವರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೆ ಹಿಂದೂ ಸಂಘಟನೆಗಳು ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸಲಿವೆ ಎಂದು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.