ADVERTISEMENT

ಯಳಂದೂರು | ಆಸ್ಪತ್ರೆ ಕಟ್ಟಡ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 4:24 IST
Last Updated 13 ಸೆಪ್ಟೆಂಬರ್ 2025, 4:24 IST
ಯಳಂದೂರು ಪಟ್ಟಣದಲ್ಲಿ ನಡೆಯುತ್ತಿರುವ ನೂತನ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶುಕ್ರವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ವೀಕ್ಷಿಸಿದರು 
ಯಳಂದೂರು ಪಟ್ಟಣದಲ್ಲಿ ನಡೆಯುತ್ತಿರುವ ನೂತನ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶುಕ್ರವಾರ ಶಾಸಕ ಎ.ಆರ್.ಕೃಷ್ಣಮೂರ್ತಿ ವೀಕ್ಷಿಸಿದರು    

ಯಳಂದೂರು: ಪಟ್ಟಣದಲ್ಲಿ ನಿರ್ಮಾಣ ಹಂತದ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

100 ಹಾಸಿಗೆಗಳ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ನಿಗದಿತ ಸಮಯದಲ್ಲಿ ಕಟ್ಟಡ ನಿರ್ಮಾಣ ಮುಗಿಯಲಿದೆ. ಜತೆಗೆ ಶವಾಗಾರದ ಕಾಮಗಾರಿಯನ್ನು ಆರಂಭಿಸಲು ಸೂಚಿಸಲಾಗಿದೆ. ಕೊಳ್ಳೇಗಾಲದಲ್ಲಿ 250 ಹಾಸಿಗೆಗಳ ಆಸ್ಪತ್ರೆ ನಿರ್ಮಿಸಲು ಯೋಜನೆ ರೂಪಿಸಿ ಸ್ಥಳವನ್ನು ನಿಗದಿ ಮಾಡಲಾಗಿದೆ ಎಂದರು.

ಗ್ಯಾರಂಟಿ ಯೋಜನೆ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ. ಚಂದ್ರು, ಮುಖಂಡರಾಧ ಜೆ. ಯೋಗೇಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹೇಶ್, ವೈ.ಜಿ.ರಂಗನಾಥ, ರಘು, ವೈದ್ಯಾಧಿಕಾರಿ ಡಾ.ಶ್ರೀಧರ್ ಹಾಗೂ ಇತರರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.