ಹನೂರು: ತಾಲ್ಲೂಕಿನ ಹಲವೆಡೆ ಭಾನುವಾರ ಸುರಿದ ಮಳೆಗೆ ಶಾಗ್ಯದ ಮಹೇಶ್ ರಾಧಾಕೃಷ್ಣಶೆಟ್ಟಿ ಎಂಬುವವರ ಮನೆ ಛಾವಣಿ ಕುಸಿದಿದೆ.
ಸೋಮವಾರ ಬೆಳಿಗ್ಗೆವರೆಗೆ ಸುರಿದ ಮಳೆಯಿಂದ ಹೆಂಚಿನ ಮನೆಯ ಮೇಲ್ಛಾವಣಿ ಕುಸಿದಿದೆ. ಮನೆಯವರೆಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಕೃತಿ ವಿಕೋಪದ ಸೂಕ್ತ ಪರಿಹಾರ ಕೊಡಿಸಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.