ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ 17 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ನಾಲ್ಕು ಮಂದಿ ಗುಣಮುಖರಾಗಿದ್ದಾರೆ. ಸಾವಿನ ಪ್ರಕರಣ ವರದಿಯಾಗಿಲ್ಲ.
ಸದ್ಯ ಜಿಲ್ಲೆಯಲ್ಲಿ 100 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 53 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 14 ಮಂದಿ ಐಸಿಯುನಲ್ಲಿದ್ದಾರೆ. ಈ ವರೆಗೆ ಜಿಲ್ಲೆಯಲ್ಲಿ 6,293 ಪ್ರಕರಣಗಳು ದೃಢಪಟ್ಟಿದೆ. 6,065 ಮಂದಿ ಗುಣಮುಖರಾಗಿದ್ದಾರೆ. 108 ಮಂದಿ ಕೋವಿಡ್‌ನಿಂದ 20 ಮಂದಿ ಕೋವಿಡ್ ಯೇತರ ಕಾರಣದಿಂದ ಮೃತಪಟ್ಟಿದ್ದಾರೆ.
ಬುಧವಾರ 1,275 ಮಂದಿಯ ಕೋವಿಡ್ ಪರೀಕ್ಷಾ ವರದಿ ಬಂದಿದ್ದು, 1,258 ಮಂದಿಯ ವರದಿ ನೆಗೆಟಿವ್ ಬಂದಿವೆ. 17 ಮಂದಿಗೆ ಸೋಂಕಿರುವುದು ಖಚಿತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.