ADVERTISEMENT

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಅಕ್ರಮ ಪ್ರವೇಶ: ₹25 ಸಾವಿರ ದಂಡ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 15:06 IST
Last Updated 2 ಜೂನ್ 2025, 15:06 IST
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಿಗೆ ಕಾರಿನೊಂದಿಗೆ ಅಕ್ರಮವಾಗಿ ಪ್ರವೇಶಿಸಿದವರು 
ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕಾಡಿಗೆ ಕಾರಿನೊಂದಿಗೆ ಅಕ್ರಮವಾಗಿ ಪ್ರವೇಶಿಸಿದವರು    

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ ಇಬ್ಬರಿಗೆ ಅರಣ್ಯ ಇಲಾಖೆ ₹25 ಸಾವಿರ ದಂಡ ವಿಧಿಸಿ, ಮುಚ್ಚಳಿಕೆ ಪತ್ರ ಬರೆಸಿಕೊಂಡಿದೆ.

ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ದಂಡ ವಿಧಿಸಿದ್ದು, ಇಬ್ಬರು ಬಂಡೀಪುರದ ಮಂಗಲ ಸಮೀಪ ಕಾಡಿನೊಳಗೆ ಅತಿಕ್ರಮವಾಗಿ ಪ್ರವೇಶಿಸಿ ಕಾರು ನಿಲ್ಲಿಸಿಕೊಂಡು ಫೋಟೊ ಶೂಟ್ ಮಾಡುತ್ತಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ನೀಡಿದ ಮಾಹಿತಿ ನೀಡಿದರು. ತಕ್ಷಣ ಕಾರ್ಯ ಪ್ರವೃತ್ತರಾದ ಎಸಿಎಫ್ ನವೀನ್ ಕುಮಾರ್ ಮತ್ತು ತಂಡ ಅರಣ್ಯದೊಳಗೆ ಅಕ್ರಮ ಪ್ರವೇಶ ಮಾಡಿದವರನ್ನು ಕರೆಸಿ ದಂಡ ವಿಧಿಸಿದ್ದಾರೆ.ಮತ್ತೊಮ್ಮೆ ಕಾಡಿಗೆ ಅತಿಕ್ರಮ ಪ್ರವೇಶ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT