ADVERTISEMENT

ಮದ್ಯ ಅಕ್ರಮ ಮರಾಟ ಪ್ರಶ್ನಿಸಿದ್ದಕ್ಕೆ ಹಲ್ಲೆ

ಆರೋಪಿ ವಿರುದ್ಧ ಕಾನೂನು ಕ್ರಮಕ್ಕೆ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘ ಒತ್ತಾಯ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2026, 6:25 IST
Last Updated 10 ಜನವರಿ 2026, 6:25 IST
<div class="paragraphs"><p>ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಅಧ್ಯಕ್ಷ ಯು.ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿಯನ್ನು ಬಂಧಿಸಬೇಕು ಹಾಗೂ ಹಾಡಿಗಳಲ್ಲಿ</p></div>

ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಅಧ್ಯಕ್ಷ ಯು.ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿಯನ್ನು ಬಂಧಿಸಬೇಕು ಹಾಗೂ ಹಾಡಿಗಳಲ್ಲಿ

   

ಚಾಮರಾಜನಗರ: ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಅಧ್ಯಕ್ಷ ಯು.ರಂಗೇಗೌಡ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿಯನ್ನು ಬಂಧಿಸಬೇಕು ಹಾಗೂ ಹಾಡಿಗಳಲ್ಲಿ ಮದ್ಯ ಅಕ್ರಮ ಮಾರಾಟವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಆದಿವಾಸಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಹನೂರು ತಾಲ್ಲೂಕಿನ ಬೂದಿಪಡಗ ಗ್ರಾಮದ ಪೋಡುಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸುವಂತೆ ಪ್ರಶ್ನಿಸಿದ್ದಕ್ಕೆ ಕಿಶೋರ್ ಎಂಬಾತ ರಂಗೇಗೌಡ ಹಾಗೂ ಅವರ ಕುಟುಂಬ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದು, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಮನವಿಯಲ್ಲಿ ಏನಿದೆ?: ‘ಬೂದಿಪಡಗ ಗ್ರಾಮದಲ್ಲಿ 7 ಕುಟುಂಬಗಳು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವು. ಇದರ ವಿರುದ್ಧ ಗ್ರಾಮದ ಎಲ್ಲ ಸಮುದಾಯಗಳ ಯಜಮಾನರು ಚರ್ಚಿಸಿ ಮದ್ಯ ಮಾರಾಟ ನಿಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ಅದರಂತೆ 6 ಕುಟುಂಬಗಳು ಅಕ್ರಮ ಮದ್ಯ ಮಾರಾಟ ನಿಲ್ಲಿಸಿದ್ದು ಕಿಶೋರ್ ಮಾತ್ರ ನಿಲ್ಲಿಸಿರಲಿಲ್ಲ. ಬುಧವಾರ ಎಲ್ಲ ಕೋಮಿನ ಮುಖಂಡರು ಅವರ ಮನೆಗೆ ತೆರಳಿ ಮದ್ಯ ಮಾರಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರಿಂದ ಕುಪಿತಗೊಂಡು ಯು.ರಂಗೇಗೌಡ ಹಾಗೂ ಕುಟುಂಬ ಸದಸ್ಯರ ಮೇಲೆ ದಾಳಿ ನಡೆಸಿದ್ದಾರೆ’ ಎಂದು ಮನವಿಯಲ್ಲಿ ದೂರಲಾಗಿದೆ.

‘ಆದಿವಾಸಿಗಳು ವಾಸವಿರುವ 148 ಪೋಡುಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದ್ದು ಸಮುದಾಯದ ಯುವಕರು ದುಶ್ಚಟಗಳಿಗೆ ದಾಸರಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಲವರು ಮರಣ ಹೊಂದಿದ್ದಾರೆ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಡಿಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಡಾ.ಸಿ.ಮಾದೇಗೌಡ ಹಾಗೂ ಜಂಟಿ ಕಾರ್ಯದರ್ಶಿ ಎಸ್‌.ಮಹದೇವಯ್ಯ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.