ADVERTISEMENT

ಮಹದೇಶ್ವರ ಬೆಟ್ಟ | ಮದ್ಯ ಅಕ್ರಮ ಸಾಗಣೆ: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2025, 2:23 IST
Last Updated 4 ಸೆಪ್ಟೆಂಬರ್ 2025, 2:23 IST
ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಹದೇಶ್ವರ ಬೆಟ್ಟದ ಪೊಲೀಸರು ಮಾಲು ಸಮೇತ ವಶಕ್ಕೆ ತೆಗೆದುಕೊಂಡರು
ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಹದೇಶ್ವರ ಬೆಟ್ಟದ ಪೊಲೀಸರು ಮಾಲು ಸಮೇತ ವಶಕ್ಕೆ ತೆಗೆದುಕೊಂಡರು   

ಮಹದೇಶ್ವರ ಬೆಟ್ಟ: ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.

ಮಲೆ ಮಾದೇಶ್ವರ ಬೆಟ್ಟದ ಹುಲಿ ಗೂಡು ಹಾಗೂ ತಂಬಡಗೇರಿ ರಸ್ತೆಯಲ್ಲಿ ಬೈಕ್‌ನಲ್ಲಿ ₹28,000 ಬೆಲೆಬಾಳುವ 576 ಮದ್ಯದ ಸ್ಯಾಸೆಟ್‌ಗಳನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಮಹದೇಶ್ವರ ಬೆಟ್ಟದ ಇನ್‌ಸ್ಪೆಕ್ಟರ್‌ ಜಗದೀಶ್ ನೇತೃತ್ವದ ತಂಡ ಬೈಕ್‌ ತಡೆದು ತಪಾಸಣೆ ನಡೆಸಿದೆ. ವಡ್ಡರ ದೊಡ್ಡಿಯ ಜೇಮ್ಸ್ ಬಿನ್ ಅರ್ಪುದಸ್ವಾಮಿ ಎಂಬಾತನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT