ಬಂಧನ
(ಸಾಂದರ್ಭಿಕ ಚಿತ್ರ)
ಕೊಳ್ಳೇಗಾಲ: ತಾಲ್ಲೂಕಿನ ಪುಟ್ಟವೀರಮ್ಮನ ದೊಡ್ಡಿ ಗ್ರಾಮದ ಹೊರವಲಯದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ಗ್ರಾಮದ ರಂಗೇಗೌಡ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಈತ ಗಾಂಜಾವನ್ನು ಗ್ರಾಮದ ಹೊರವಲಯದಲ್ಲಿ ಮಾರಾಟ ಮಾಡುವ ಸಲುವಾಗಿ ಸಾಗಣೆ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಪಿಎಸ್ಐ ಸುಪ್ರೀತ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಆರೋಪಿಯಿಂದ 140 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದಾಳಿಯಲ್ಲಿ ಕಾನ್‌ಸ್ಟಬಲ್ ದುಂಡಪ್ಪ ಪೂಜಾರಿ, ಮನೋಹರ್, ವಿಜಯ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.