ADVERTISEMENT

ಕೊಳ್ಳೇಗಾಲ | ಪಡಿತರ ಅಕ್ಕಿ ಅಕ್ರಮ ಸಾಗಣೆ: ವಾಹನ ಸಹಿತ ಒಬ್ಬನ ಬಂಧನ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2025, 2:46 IST
Last Updated 3 ಆಗಸ್ಟ್ 2025, 2:46 IST
ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವುದು
ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿರುವುದು   

ಕೊಳ್ಳೇಗಾಲ: ತಾಲ್ಲೂಕಿನ ಕಾಮಗೆರೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಗೂಡ್ಸ್ ವಾಹನದಲ್ಲಿ  ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ  ತಿ.ನರಸೀಪುರ ಪಟ್ಟಣದ ನಿವಾಸಿ ಅಬ್ದುಲ್ ರೆಹಮಾನ್ ಎಂಬಾತನನ್ನು ಗ್ರಾಮಾಂತರ ಪೊಲೀಸರು  ಬಂಧಿಸಿದ್ದಾರೆ.  

ಆರೋಪಿಯಿಂದ 23 ಚೀಲದಲ್ಲಿದ್ದ 745 ಕೆ.ಜಿ. ಪಡಿತರ ಅಕ್ಕಿ ಹಾಗೂ ಸಾಗಣೆಗೆ ಬಳಸಿದ್ದ ಗೂಡ್ಸ್ ವಾಹನವನ್ನು ಜಪ್ತಿ ಮಾಡಿದ್ದಾರೆ. 

ಸಹವರ್ತಿ ಆರೋಪಿ ಮಹಮ್ಮದ್ ಸುಹೇಬ್ ಪರಾರಿ ಯಾಗಿರುವ ಮಾಹಿತಿ ನೀಡಲಾಗಿದೆ.  ಕಾಮಗೆರೆ ಗ್ರಾಮ ಹಾಗೂ ಅಕ್ಕಪಕ್ಕದ ಹಳ್ಳಿಗಳಿಂದ ಕಡಿಮೆ ಬೆಲೆಗೆ ಪಡಿತರ ಅಕ್ಕಿಯನ್ನು ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು. ಖ ಗ್ರಾಮಾಂತರ  ಠಾಣೆಯ ಪಿಎಸ್ಐ ಸುಪ್ರೀತ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು.  ಪ್ರಕರಣ ದಾಖಲಿಲಾಗಿದೆ.  ಆಹಾರ ಇಲಾಖೆ ನಿರೀಕ್ಷಕ ಪ್ರಸಾದ್  ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.