
ಪ್ರಜಾವಾಣಿ ವಾರ್ತೆ
ಕೊಳ್ಳೇಗಾಲ: ತಾಲ್ಲೂಕಿನ ನರೀಪುರ ಗ್ರಾಮದ ವೃತ್ತದ ಬಳಿ ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿದ ಪೊಲೀಸರು 4 ಎತ್ತಿನ ಗಾಡಿಗಳನ್ನು ಮರಳು ಸಮೇತ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.
ಕಾವೇರಿ ನದಿ ತೀರದಲ್ಲಿ ಮರಳನ್ನು ತುಂಬಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ನಗರಪ್ರದೇಶಕ್ಕೆ ಬರುತ್ತಿದ್ದಾಗ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಸುಪ್ರೀತ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದರು.
ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮಕ್ಕಾಗಿ ಭೂ ವಿಜ್ಞಾನ ಇಲಾಖೆಯನ್ನು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.