ADVERTISEMENT

ಗುಂಡ್ಲುಪೇಟೆ | ಕಠಿಣ ಕಾನೂನುಗಳಿದ್ದರೂ ನಿಲ್ಲದ ದೌರ್ಜನ್ಯ: ಕಳವಳ

ಹೆಣ್ಣು ಮಕ್ಕಳ ರಕ್ಷಣೆ ಸಮಾಜದ ಕರ್ತವ್ಯ: ಹಿರಿಯ ನ್ಯಾಯಾಧೀಶ ಈಶ್ವರ್ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2025, 13:55 IST
Last Updated 6 ಫೆಬ್ರುವರಿ 2025, 13:55 IST
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಭೇಟಿ ಬಚಾವೊ ಭೇಟಿ ಪಡಾವೋ ಅರಿವು ಕಾರ್ಯಕ್ರಮ ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಮಾತನಾಡಿದರು.
ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಭೇಟಿ ಬಚಾವೊ ಭೇಟಿ ಪಡಾವೋ ಅರಿವು ಕಾರ್ಯಕ್ರಮ ಉದ್ಘಾಟಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಮಾತನಾಡಿದರು.   

ಗುಂಡ್ಲುಪೇಟೆ: ‘ಸರ್ಕಾರಗಳು ಬಾಲ್ಯ ವಿವಾಹ ತಡೆಗೆ ಹಾಗೂ ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದರೂ ಜಿಲ್ಲೆಯಲ್ಲಿ ೀ  ಪ್ರಕರಣಗಳು ಸಂಪೂರ್ಣವಾಗಿ ನಿಲ್ಲದಿರುವುದು ಬೇಸರದ ಸಂಗತಿ. ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಅಧಿಕಾರಿಗಳು, ಪೋಷಕರು ಎಚ್ಚರವಹಿಸಬೇಕು’  ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಈಶ್ವರ್ ಸಲಹೆ ನೀಡಿದರು.

ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ‘ಬೇಟಿ ಬಚಾವೊ ಬೇಟಿ ಪಢಾವೋ’ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಹಂಗಳ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಬಾಲ್ಯವಿವಾಹ ಪ್ರಕರಣಗಳನ್ನು ತಡೆಗಟ್ಟುವುದು ಸಮಾಜದ ಹೊಣೆಗಾರಿಕೆ ಎಂದರು. ಸಂವಿಧಾನದಲ್ಲಿ ಮಕ್ಕಳಿಗೆ ಮುಕ್ತವಾಗಿ ಭಾಗವಹಿಸುವ, ಮಾತನಾಡುವ, ಶಿಕ್ಷಣ ಪಡೆಯುವ ಹಕ್ಕು ನೀಡಲಾಗಿದೆ. ಪೋಷಕರು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕು ಎಂದರು. ಸಮಾಜ ಮೌಲ್ಯಗಳನ್ನು ಕಳೆದುಕೊಳ್ಳುವ ನಿಟ್ಟಿನಲ್ಲಿ ಸಾಗುತ್ತಿರುವುದು ಆತಂಕಕಾರಿ ಎಂದು ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದರು.

ADVERTISEMENT

ಮಕ್ಕಳನ್ನು  ಸಭ್ಯ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕಾರ ಅಪ್ರಾಪ್ತ ವಯಸ್ಸಿನಲ್ಲಿ ಮಕ್ಕಳಿಗೆ ಮದುವೆ ಮಾಡುವುದು ಕಾನೂನಿನಡಿ ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆ ಜೀವಾವಧಿ ಶಿಕ್ಷೆ ಆಗಲಿದೆ. ಹೆಣ್ಣುಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಮಾಹಿತಿಯನ್ನು  ಕಾನೂನುಗಳ ಮಾಹಿತಿಯನ್ನು ಪಡೆಯಬೇಕು. ಮಕ್ಕಳನ್ನು ರಕ್ಷಿಸಬೇಕು ಎಂದು ನ್ಯಾಯಾಧೀಶ ಈಶ್ವರ್ ತಿಳಿಸಿದರು.

ಪಿಎಸ್‌ಐ ಜಯರಾಂ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದಲ್ಲಿ ಒಳ್ಳೆಯ ಪ್ರಜೆಗಳನ್ನಾಗಿ ಮಾಡುವ ಜವಾಬ್ದಾರಿ ಪೋಷಕರ ಮೇಲಿದೆ. ಮಕ್ಕಳನ್ನು ಬಾಲ ಕಾರ್ಮಿಕ ಪದ್ಧತಿಗೆ ಸಿಲುಕದಂತೆ ಎಚ್ಚರವಹಿಸಬೇಕು. ಬಾಲ ಕಾರ್ಮಿಕ ಪದ್ಧತಿ ಕಾನೂನು ಪ್ರಕಾರ ಶಿಕ್ಷಾರ್ಹವಾಗಿದ್ದು, ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬಾಲನ್ಯಾಯ ಮಂಡಳಿಯ ಮಾಜಿ ಸದಸ್ಯ ಟಿ.ಜೆ. ಸುರೇಶ್ ಮಾತನಾಡಿ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ಉದ್ದೇಶ ಹೆಣ್ಣು ಭ್ರೂಣ ಹತ್ಯೆ ತಡೆಯುವುದಾಗಿದೆ. ಪ್ರತಿ ಹೆಣ್ಣು ಮಗುವಿನ ಸುರಕ್ಷತೆ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಹೆಣ್ಣುಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುಬೇಕಿದೆ, ಹೆಣ್ಣು ಮಕ್ಕಳ ಲಿಂಗ ಅನುಪಾತದಲ್ಲಿನ ಕುಸಿತ ತಡೆಯಬೇಕಿದೆ ಎಂದರು.

ವಕೀಲ ರಾಜೇಶ್ ಮಾತನಾಡಿ ‘ಸಂವಿಧಾನ ಅಡಿಯಲ್ಲಿರುವ ಕಾನೂನುಗಳ ಬಗ್ಗೆ ಹೆಚ್ಚಿನ ಅರಿವು ಹೊಂದಬೇಕು ಎಂದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜು  ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ವೃಷಭೇಂದ್ರ, ಗೌರಮ್ಮ, ಚಿಕ್ಕತಾಯಮ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರುದ್ರವ್ವ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತಮಲ್ಲಪ್ಪ ಇದ್ದರು.

‘ಗಂಡುಹೆಣ್ಣು ಲಿಂಗಾನುಪಾತ ಕುಸಿಯದಂತೆ ಎಚ್ಚರ ವಹಿಸಿ’ ಬಾಲ್ಯವಿವಾಹ ತಡೆಗೆ ಸಮಾಜದ ಸಹಭಾಗಿತ್ವ ಅಗತ್ಯ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಅಗತ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.