ೆ
ಗುಂಡ್ಲುಪೇಟೆ: ತಾಲ್ಲೂಕಿನ ನೇನೇಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡೋಂಗ್ರಿ ಗೆರೆಶಿಯಾ ಕಾಲೊನಿಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಅಂಗನವಾಡಿ ಕಟ್ಟಡವನ್ನು ಶಾಸಕ ಎಚ್.ಎಂ.ಗಣೇಶಪ್ರಸಾದ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಅನುದಾನ ಹೊಂದಾಣಿಕೆ ಮಾಡಿಕೊಂಡು ₹17 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಅಂಗನವಾಡಿ ಕೇಂದ್ರ ನಿರ್ಮಿಸಲಾಗಿದೆ. ಕಾಲೊನಿಯ ನಿವಾಸಿಗಳು ಮಕ್ಕಳನ್ನು ತಪ್ಪದೇ ಅಂಗನವಾಡಿಗೆ ಕಳುಹಿಸಿ, ಕೇಂದ್ರದಿಂದ ಸಿಗುವ ಇತರೆ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕಿನಲ್ಲಿ ಉತ್ತಮ ರೀತಿಯಲ್ಲಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣ ದೊರಕಲು ಅಂಗನವಾಡಿ ಕೇಂದ್ರಗಳ ನಿರ್ಮಾಣ ಮತ್ತು ದುರಸ್ತಿಗೆ ಕ್ರಮ ವಹಿಸಲಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಅಂಗನವಾಡಿಗಳ ಸ್ಥಿತಿಗತಿ ಸಾಕಷ್ಟು ಸುಧಾರಿಸಿದೆ. ಸೌಲಭ್ಯ ಒದಗಿದಲು ಅಂಗನವಾಡಿ ಕೇಂದ್ರಗಳ ಪಟ್ಟಿ ಮಾಡಲಾಗಿದೆ ಎಂದು ತಿಳಿಸಿದರು.
ಡೋಂಗ್ರಿ ಗೆರೆಶಿಯಾ ಕಾಲೊನಿ ನಿವಾಸಿಗರು ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷ ಬಿ.ಎಸ್.ನಾಗೇಂದ್ರ, ಪುರಸಭಾ ಅಧ್ಯಕ್ಷ ಮಧುಸೂದನ್, ಉಪಾಧ್ಯಕ್ಷ ಅಣ್ಣಯ್ಯಸ್ವಾಮಿ, ಸಿಡಿಪಿಒ ಹೇಮಾವತಿ, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ತಾಲ್ಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಮುಖಂಡರಾದ ವೀರನಪುರ ಗುರುಪ್ರಸಾದ್, ಚಿಕ್ಕಣ್ಣ, ಉಮಾಪತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.