ADVERTISEMENT

ಚಾಮರಾಜನಗರ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 6:41 IST
Last Updated 4 ಡಿಸೆಂಬರ್ 2025, 6:41 IST
ಯಡಪುರದ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆಯಲ್ಲಿ ಬುಧವಾರ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು
ಯಡಪುರದ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆಯಲ್ಲಿ ಬುಧವಾರ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು   

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಯಡಪುರದ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧನಾ ಆಸ್ಪತ್ರೆಯಲ್ಲಿ ಬುಧವಾರ ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.

ಪುನರ್ವಸತಿ ಕೇಂದ್ರದಲ್ಲಿ ಅಂಗವಿಕಲರಿಗೆ ಕೃತಕ ಅಂಗಾಂಗಗಳ ಜೋಡಣೆ, ದುರಸ್ತಿ, ಯುಡಿಐಡಿ ಕಾರ್ಡ್ ವಿತರಣೆ ಸೇರಿದಂತೆ ಹಲವು ಸೌಲಭ್ಯಗಳು ಸಿಗಲಿವೆ. ಅಗತ್ಯತೆ ಇದ್ದವರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಆಸ್ಪತ್ರೆಯ ಡೀನ್ ಮತ್ತು ನಿರ್ದೇಶಕ ಡಾ.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಹೆಚ್.ಆರ್.ಸುರೇಶ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಡಾ.ಕೆ.ಎನ್. ಮಂಜುನಾಥ್‌, ಜಿಲ್ಲಾ ಸರ್ಜನ್ ಡಾ.ಚಿನ್ನಬೋವಿ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್, ರೂಪೇಶ್, ಕೃಷ್ಣಮೂರ್ತಿ, ಮಹದೇವಸ್ವಾಮಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.