ADVERTISEMENT

ಬಾಬು ಜಗಜೀವನ್ ರಾಮ್ ಹಾಸ್ಟೆಲ್ ನಿರ್ಮಾಣಕ್ಕೆ ಹಣ: ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 3 ಜನವರಿ 2022, 15:45 IST
Last Updated 3 ಜನವರಿ 2022, 15:45 IST

ಬೆಂಗಳೂರು: ‘ಚಾಮರಾಜನಗರದಲ್ಲಿ ಬಾಬು ಜಗಜೀವನ್ ರಾಮ್ ಭವನ ಹಾಗೂ ಹಾಸ್ಟೆಲ್ ನಿರ್ಮಾಣಕ್ಕೆ ಅಗತ್ಯ ಹಣ ಬಿಡುಗಡೆ ಮಾಡಬೇಕು’ ಎಂದು ರಾಜ್ಯ ಸರ್ಕಾರಕ್ಕೆಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ನಗರದ ಚ.ಗು. ನಾಗರಾಜು ಸೇರಿದಂತೆ ಐವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಲೇವಾರಿ ಮಾಡಿದೆ.

ವಿಚಾರಣೆ ವೇಳೆ ಬಾಪೂಜಿ ಸಾರ್ವಜನಿಕ ವಿದ್ಯಾರ್ಥಿ ನಿಲಯ ಸಂಸ್ಥೆಯ ಪರ ವಕೀಲರು, ‘ಭವನ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ. ಕಟ್ಟಡ ನಿರ್ಮಾಣ ಕಾರ್ಯವೂ ಆರಂಭವಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ADVERTISEMENT

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಉದ್ದೇಶಿತ ಸ್ಥಳದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಬೇಕು. ಭವನ ನಿರ್ಮಾಣ ಪೂರ್ಣವಾಗುತ್ತಲೇ, ಹಾಸ್ಟೆಲ್ ನಿರ್ಮಾಣ ಕಾರ್ಯ ಆರಂಭಿಸಬೇಕು. ಈ ಕುರಿತು ಜಿಲ್ಲಾಧಿಕಾರಿ ಮೇಲ್ವಿಚಾರಣೆ ನಡೆಸಬೇಕು’ ಎಂದು ಆದೇಶಿಸಿ ಅರ್ಜಿ ಇತ್ಯರ್ಥಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.