ADVERTISEMENT

ಗೌರಮ್ಮಗೆ ಜಾನಪದ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 15:25 IST
Last Updated 26 ಫೆಬ್ರುವರಿ 2020, 15:25 IST
ಗೌರಮ್ಮ
ಗೌರಮ್ಮ   

ಚಾಮರಾಜನಗರ: ತಾಲ್ಲೂಕಿನ ಜಾಲನಹಳ್ಳಿ ಹುಂಡಿಯ ಸೋಬಾನೆ ಹಾಡುಗಾರ್ತಿ ಗೌರಮ್ಮ ಅವರು 2019ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

64ರ ಹರೆಯದ ಗೌರಮ್ಮ ಅವರು 40 ವರ್ಷಗಳಿಂದ ಸೋಬಾನೆ ಪದಗಳನ್ನು ಹಾಡುತ್ತಿದ್ದಾರೆ. ತಮ್ಮ ತಾಯಿ ಪುಟ್ಟಮಾದಮ್ಮ ಅವರಿಂದ ಸೋಬಾನೆ ಪದಗಳ ಗಾಯನ ಕಲಿತಿರುವ ಗೌರಮ್ಮ, ಜಿಲ್ಲೆಯಲ್ಲಿ ಮಾತ್ರವಲ್ಲದೇ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಲ್ಲಿ ತಮ್ಮ‌ಲ್ಲಿರುವ ಜನಪದೀಯ ಕಲೆಯನ್ನು ಪ್ರದರ್ಶಿಸಿದ್ದಾರೆ.

ಬೆಂಗಳೂರು, ಮೈಸೂರು ಆಕಾಶವಾಣಿಗೂ ಅವರು ಹಾಡಿದ್ದಾರೆ. ಸ್ಥಳೀಯವಾಗಿ ನಡೆಯುವ ಹಬ್ಬ ಹರಿದಿನಗಳು, ಗೃಹಪ್ರವೇಶ, ಮದುವೆ, ನಾಮಕರಣ ಸೇರಿದಂತೆ ಶುಭ ಸಮಾರಂಭಗಳಲ್ಲಿ ಸೋಬಾನೆ ಹಾಡುತ್ತಾ ಜನಮನ್ನಣೆ ಗಳಿಸಿದ್ದಾರೆ.

ADVERTISEMENT

ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.