ಚಾಮರಾಜನಗರ: ‘ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ವತಿಯಿಂದ ಕೊಳ್ಳೇಗಾಲದಲ್ಲಿ ಮಾರ್ಚ್ 8ರಂದು ಶಿಕ್ಷಕ ಆಕಾಂಕ್ಷಿಗಳಿಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ’ ಎಂದು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಜಿಲ್ಲಾಧ್ಯಕ್ಷ ನಂಜುಂಡಸ್ವಾಮಿ ತಿಳಿಸಿದರು.
‘ಜಿಲ್ಲೆಯಲ್ಲಿ 119 ಖಾಸಗಿ ಶಾಲೆಗಳಿದ್ದು ಈ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಅಲ್ಲದೇ ಇತರೆ ಹುದ್ದೆಗಳು ಖಾಲಿ ಇದ್ದು ಅವುಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಅಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆ ತನಕ ಕೊಳ್ಳೇಗಾಲದ ರೋಟರಿ ಭವನದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಎನ್‍ಎಸ್‍ಟಿ, ಡಿ.ಇಡಿ, ಬಿ.ಇಡಿ ಸೇರಿದಂತೆ ಇತರೆ ಪದವಿ ಪಡೆದಿರುವವರು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗವನ್ನು ಪಡೆಯಬಹುದು’ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ರಮೇಶ್, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಉಮೇಶ್ ಚಂದ್ರ, ಕೊಳ್ಳೇಗಾಲ ರೋಟರಿ ಕ್ಲಬ್ ಅಧ್ಯಕ್ಷೆ ಸರಸ್ವತಿ ಹೊನ್ನಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.