ADVERTISEMENT

ಚಾಮರಾಜನಗರ: ಪತ್ರಕರ್ತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 15:18 IST
Last Updated 6 ನವೆಂಬರ್ 2020, 15:18 IST
ಸುರೇಶ್‌
ಸುರೇಶ್‌   

ಚಾಮರಾಜನಗರ: ಪತ್ರಕರ್ತ, ದೊಡ್ಡರಾಯಪೇಟೆಯ ನಿವಾಸಿ ಡಿ.ಎಂ.ಸುರೇಶ್‌ (55) ಅವರು ಶುಕ್ರವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಶ್ವಾಸಕೋಶ ತೊಂದರೆಯಿಂದ ಬಳಲುತ್ತಿದ್ದ ಸುರೇಶ್ ಅವರು ಕೆಲವು ಸಮಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು. ಖಿನ್ನತೆಯಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅವರ ಸಹೋದರ ಶಶಿಕುಮಾರ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಮುಂಜಾವು ಕ್ರಿಮಿನಾಶಕ ಸೇವಿಸಿದ್ದಾರೆ ಎನ್ನಲಾಗಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಅಸ್ವಸ್ಥರಾಗಿದ್ದ ಸುರೇಶ್‌ ಅವರನ್ನು ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್‌.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸಂಜೆ ಮೃತಪಟ್ಟಿದ್ದಾರೆ.

ADVERTISEMENT

ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶನಿವಾರ ದೊಡ್ಡರಾಯಪೇಟೆಯಲ್ಲಿ ನಡೆಯಲಿದೆ.

ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.