ADVERTISEMENT

ಸಿಬಿಎಸ್‌ಇ: ಜೆಎಸ್‌ಎಸ್ ಪಬ್ಲಿಕ್ ಶಾಲೆಗೆ ಶೇ 100 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 15:44 IST
Last Updated 23 ಜುಲೈ 2022, 15:44 IST
ಉತ್ಸವ್‌
ಉತ್ಸವ್‌   

ಚಾಮರಾಜನಗರ: 2021–22ನೇ ಸಾಲಿನ ಕೇಂದ್ರಿಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್‌ಇ) 10ನೇ ತರಗತಿ ಪರೀಕ್ಷೆಯಲ್ಲಿ ನಗರದ ಜೆಎಸ್‌ಎಸ್‌ ಪಬ್ಲಿಕ್‌ ಶಾಲೆ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

ಶಾಲೆಯ ವಿದ್ಯಾರ್ಥಿ ಉತ್ಸವ್ ಆರ್. 493 (ಶೇ 98.6) ಅಂಕಗಳನ್ನು ಪಡೆದು ಮೊದಲ ಸ್ಥಾನ ಗಳಿಸಿದ್ದಾನೆ.

18 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳಾದ ಗಗನ್ ಶೇ 94ರಷ್ಟು, ನೂರ್ ಪಾತಿಮಾ ಶೇ 93.2ರಷ್ಟು, ತೋವಿದ್ ಖಾನ್ ಶೇ 90.40 ರಷ್ಟು ಅಂಕಗಳಿಸಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 10 ಮಂದಿ ಶೇ 80ಕ್ಕಿಂತ ಹೆಚ್ಚು ಅಂಕ, ನಾಲ್ವರು ಶೇ 70ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದುಕೊಂಡಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಎಚ್.ಎಂ.ಉಮೇಶ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.