ADVERTISEMENT

ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಿ: ನ್ಯಾಯಾಧೀಶ ಬಸವರಾಜ ತಳವಾರ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 6:20 IST
Last Updated 31 ಜನವರಿ 2026, 6:20 IST
ಗುಂಡ್ಲುಪೇಟೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಚ್ಚತಾ ದಿನದ ಅಂಗವಾಗಿ ನಡೆದ ‌ಸ್ವಚ್ಚತಾ ಕಾರ್ಯಕ್ಕೆ ಸಿವಿಲ್ ನ್ಯಾಯಾಧೀಶರಾದ ಬಸವರಾಜ ತಳವಾರ್ ಚಾಲನೆ ನೀಡಿದರು.
ಗುಂಡ್ಲುಪೇಟೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ರಾಷ್ಟ್ರೀಯ ಸ್ವಚ್ಚತಾ ದಿನದ ಅಂಗವಾಗಿ ನಡೆದ ‌ಸ್ವಚ್ಚತಾ ಕಾರ್ಯಕ್ಕೆ ಸಿವಿಲ್ ನ್ಯಾಯಾಧೀಶರಾದ ಬಸವರಾಜ ತಳವಾರ್ ಚಾಲನೆ ನೀಡಿದರು.   

ಗುಂಡ್ಲುಪೇಟೆ: ನಮ್ಮ ಸುತ್ತಮುತ್ತಲಿನ ಸ್ಥಳಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವುದು ಪ್ರಜ್ಞಾವಂತ ನಾಗರಿಕರ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ ತಳವಾರ ಸಲಹೆ ನೀಡಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸ್ವಚ್ಚತಾ ದಿನದ ಕಾರ್ಯಕ್ರಮದಲ್ಲಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುತ್ತಮುತ್ತಲಿನ ಪರಿಸರ ಸ್ವಚ್ಚವಾಗಿಟ್ಟುಕೊಂಡರೆ ಅನಾರೋಗ್ಯ ಸಮಸ್ಯೆಯಿಂದ ದೂರವಿರಬಹುದು. ಸಾರ್ವಜನಿಕರು ಕನನಿಷ್ಠ ಮನೆಯ ಸುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಾರ್ವಜನಿಕ ಸ್ಥಳಗಳನ್ನು ಸುಂದರ ಮತ್ತು ಸ್ವಚ್ಛವಾಗಿಟ್ಟುಕೊಳ್ಳಲು ಸಹಕಾರ ನೀಡಬೇಕು ಎಂದರು.

ಪೊರಕೆ ಹಿಡಿದು ಸ್ವಚ್ಚತಾ ಕಾರ್ಯಕ್ಕೆ ಇಳಿದ ನ್ಯಾಯಾಧೀಶರು ನ್ಯಾಯಾಲಯದ ಆವರಣದಲ್ಲಿ ಬೆಳೆದಿದ್ದ ಪಾರ್ಥೇನಿಯಂ ಗಿಡಗಳನ್ನು ತೆರವುಗೊಳಿಸಿ  ಒಣ ಎಲೆಗಳನ್ನು ಸ್ವಚ್ಛ ಮಾಡಿದರು. ನ್ಯಾಯಾಲಯದ ಸಿಬ್ಬಂದಿಗಳು ಮತ್ತು ವಕೀಲರ ಸಂಘದ ಪದಾಧಿಕಾರಿಗಳು ಸಾಥ್ ನೀಡಿದರು.

ADVERTISEMENT

ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಟಿ ದೀಪು, ಪುರಸಭೆ ಮತ್ತು ನ್ಯಾಯಲಯದ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.