ADVERTISEMENT

ಕೆರೆ ಕಟ್ಟೆಗಳ ಪುನರುಜ್ಜೀವನಕ್ಕೆ ಗಮನಹರಿಸಿ:ಶಾಂತಕುಮಾರ್‌

ಎಚ್.ಮೂಕಹಳ್ಳಿಯಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಗ್ರಾಮ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 3:13 IST
Last Updated 3 ಏಪ್ರಿಲ್ 2024, 3:13 IST
ಚಾಮರಾಜನಗರ ತಾಲ್ಲೂಕಿನ ಎಚ್‌.ಮೂಕಹಳ್ಳಿಯಲ್ಲಿ ಕಬ್ಬು ಬೆಳಗಾರರ ಸಂಘದ ಗ್ರಾಮ ಘಟಕದ ಉದ್ಘಾಟನೆ ಮಂಗಳವಾರ ನಡೆಯಿತು
ಚಾಮರಾಜನಗರ ತಾಲ್ಲೂಕಿನ ಎಚ್‌.ಮೂಕಹಳ್ಳಿಯಲ್ಲಿ ಕಬ್ಬು ಬೆಳಗಾರರ ಸಂಘದ ಗ್ರಾಮ ಘಟಕದ ಉದ್ಘಾಟನೆ ಮಂಗಳವಾರ ನಡೆಯಿತು   

ಚಾಮರಾಜನಗರ: ಹವಾಮಾನ ಬದಲಾವಣೆಯಂತಹ ಪ್ರಾಕೃತಿಕ ಸವಾಲನ್ನು ಸಮರ್ಥವಾಗಿ ಎದುರಿಸಲು ರೈತರು ವೈಜ್ಞಾನಿಕವಾಗಿ ಚಿಂತನೆ ನಡೆಸುವ ಅಗತ್ಯವಿದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ  ಕುರುಬೂರು ಶಾಂತಕುಮಾರ್ ಮಂಗಳವಾರ ಹೇಳಿದರು.

ತಾಲ್ಲೂಕಿನ ಎಚ್.ಮೂಕಹಳ್ಳಿ ಗ್ರಾಮದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘ ಹಾಗೂ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ‘ಹವಾಮಾನ ಬದಲಾವಣೆಯಿಂದ ಕೃಷಿ ಕ್ಷೇತ್ರ ದುರ್ಬಲವಾಗುತ್ತಿದೆ. ಬರಗಾಲದಿಂದ ಬೆಳೆಗಳು ಒಣಗುತ್ತಿವೆ. ಕೊಳವೆ ಬಾವಿಗಳು ಬತ್ತುತ್ತಿವೆ. ರೈತರು ಹಳ್ಳಿಗಳಲ್ಲಿ ಗುಡಿ ಗೋಪುರ ಕಟ್ಟುವ ಚಿಂತನೆ ಕಡಿಮೆ ಮಾಡಿ, ಕೆರೆ ಕಟ್ಟೆ ಪುನರುಜ್ಜೀವನ ಹಾಗೂ ಕಟ್ಟುವ ಕೆಲಸಕ್ಕೆ ಗಮನ ಹರಿಸಿದರೆ ಕೃಷಿ ಕ್ಷೇತ್ರ ಸಮೃದ್ಧಿಯಾಗಲು ಸಹಕಾರಿಯಾಗುತ್ತದೆ’ ಎಂದರು.

‘ಬರಗಾಲದ ಬವಣೆಯಿಂದ ರೈತರಿಗೆ ಕುಡಿಯುವ ನೀರು, ದನಕರುಗಳಿಗೆ ಮೇವು ಸಿಗುತ್ತಿಲ್ಲ ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿ ತಲ್ಲೀನರಾಗಿದ್ದಾರೆ. ಈ ಬಗ್ಗೆ ಚಿಂತನೆ ನಡೆಸಲು ಬುಧವಾರ ಮೈಸೂರಿನಲ್ಲಿ ಬರಗಾಲದ ಚುನಾವಣೆ ರೈತರ ದಿಕ್ಸೂಚಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ’ ಎಂದರು.

ADVERTISEMENT

ಜಿಲ್ಲಾ ಕಾರ್ಯದರ್ಶಿ ಮೂಕಹಳ್ಳಿ ಮಹದೇವಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.  ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳಿ ದೇವರಾಜ್ ಮಾತನಾಡಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಉಡಿಗಾಲ ರೇವಣ್ಣ, ಜಿಲ್ಲಾ ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ,  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಗಸೂರು ಶಂಕರ, ತಾಲ್ಲೂಕು ಅಧ್ಯಕ್ಷ ಸತೀಶ್,  ಕೆ ಸಿ ಬಸವಣ್ಣ, ಚಂದ್ರಶೇಖರಮೂರ್ತಿ, ಗೌಡಹಳ್ಳಿ ಷಡಕ್ಷರಿ, ಹೆಗ್ಗೋಠಾರ ಶಿವಸ್ವಾಮಿ ಕುರುಬೂರು ಸಿದ್ದೇಶ್, ಪ್ರದೀಪ್ ಇತರರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.