ಕೊಳ್ಳೇಗಾಲ: ತಾಲ್ಲೂಕಿನ ಕೆಂಪನಪಾಳ್ಯ ಗ್ರಾಮದ ಕಬಿನಿ ನಾಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ನೀರಿಗೆ ಹಾರಿದ್ದ ಯುವಕನ ಶವ ಸೋಮವಾರ ರಾತ್ರಿ ಪತ್ತೆಯಾಗಿದೆ.
ತಾಲ್ಲೂಕಿನ ನರೀಪುರ ಗ್ರಾಮದ ಪ್ರೀತಮ್ ಕುಮಾರ್(18) ಮೃತ ಯುವಕ. ಯುವಕ ಕಬಿನಿ ನಾಲೆಗೆ ಹಾರಿರುವ ದೃಶ್ಯ ಸಿಸಿಟಿವಿಯಲ್ಲಿ ಸರಿಯಾಗಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಎರಡು ದಿನಗಳಿಂದ ಶೋಧಕಾರ್ಯ ನಡೆಸಿದ್ದರು. ಸೋಮವಾರ ರಾತ್ರಿ ಯುವಕನ ಶವ ತಾಲ್ಲೂಕಿನ ತಿಮ್ಮರಾಜೀಪುರ ಗ್ರಾಮದ ಕಬಿನಿ ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
‘ಮಗ ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೊರ ಹೋದವನು ಮನೆಗೆ ವಾಪಸ್ಸು ಬಂದಿಲ್ಲ’ ಎಂದು ಮೃತನ ಪೋಷಕರುನಗರ ಠಾಣೆಗೆ ದೂರು ನೀಡಿದ್ದರು. ಈಗ ಪ್ರೀತಮ್ ಪೋಷಕರು ಮೃತದೇಹದ ಚಹರೆ ಪತ್ತೆಹಚ್ಚಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.