ಕೊಳ್ಳೇಗಾಲ: ತಮಿಳು ನಟ ಕಮಲ್ ಹಾಸನ್ ವಿರುದ್ಧ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣದ) ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಗುರುಕಾರ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು, ಕಮಲ್ ಹಾಸನ್ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಅಲ್ಲದೆ ಕಮಲ್ ಹಾಸನ್ ಅವರ ಭಾವಚಿತ್ರವನ್ನು ಸುಟ್ಟರು. ನಂತರ, ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಮಹೇಶ್ ರವರೆಗೆ ಮನವಿ ಸಲ್ಲಿಸಿದರು.
ಈ ವೇಳೆ ತಾಲ್ಲೂಕು ಅಧ್ಯಕ್ಷ ಅಯಾಜ್ ಕನ್ನಡಿಗ ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆಯು ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ಲಘುವಾಗಿ ಮಾತನಾಡಿರುವ ಈ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತದದೆ ಎಂದು ಹೇಳಿದರು.
ಕನ್ನಡದ ವಿರುದ್ಧವಾಗಿ ಮಾತನಾಡುವವರು ನಮ್ಮ ಕರ್ನಾಟಕಕ್ಕೆ ಬರುವುದು ಬೇಡ. ಇದರ ಜೊತೆಗೆ ಯಾವ ಸಿನಿಮಾಗಳು ಸಹ ನಮ್ಮ ಕರ್ನಾಟಕದಲ್ಲಿ ಪ್ರದರ್ಶನವಾಗುವುದು ಬೇಡ. ಈ ಹಿನ್ನೆಲೆಯಲ್ಲಿ, ಅವರ ‘ಥಗ್ ಲೈಫ್’ ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು. ಸರ್ಕಾರ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಮಲ್ ಹಾಸನ್ ಅಭಿನಯದ ಥಗ್ ಲೈಫ್ ಸಿನಿಮ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ನೀಡದಂತೆ ಒತ್ತಾಯಿಸಿದರು. ಕನ್ನಡಿಗರು ಸ್ವಾಭಿಮಾನವನ್ನು ಮೀರಿ ಅವರ ಚಿತ್ರವನ್ನು ಬಿಡುಗಡೆ ಮಾಡಲು ಮುಂದಾದರೆ ಜಿಲ್ಲಾ ಮಟ್ಟದಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತೆವೆ ಎಂದು ಆಕ್ತೋಶ ವ್ಯಕ್ತಪಡಿಸಿದರು.
ಕರವೇ ವೇದಿಕೆ ತಾಲ್ಲೂಕು ಗೌರವಾಧ್ಯಕ್ಷ ಇದ್ರೀಶ್ ಪಾಷ, ಲಿಂಗರಾಜು, ಉಪಾಧ್ಯಕ್ಷ ಅಬ್ಜಲ್, ಮೂರ್ತಿ ಶಾಸ್ತ್ರೀ, ಕುಮಾರ್, ಕಾರ್ಯದರ್ಶಿ ಮೊಹಮ್ಮದ್ ಸಮೀರ್, ಮೊಯಿನುದ್ದೀನ್, ಮಹಿಳಾ ಸಂಘದ ಅಧ್ಯಕ್ಷೆ ರಾಜೇಶ್ವರಿ, ಅಶ್ವಿನಿ, ಕವಿತಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.