ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬೆಳಿಗ್ಗೆ ಮಲೆ ಮಹದೇಶ್ವರನ ದೇಗುಲದಲ್ಲಿ ದೇವರ ದರ್ಶನ ಪಡೆದರು.
ಬಳಿಕ ಬೆಳ್ಳಿ ದಂಡುಕೋಲು ಸೇವೆಯಲ್ಲಿ ಭಾಗವಹಿಸಿ ಬೆಳ್ಳಿತೇರಿಗೆ ಪೂಜೆ ಸಲ್ಲಿಸಿದರು.
ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ದೇವಸ್ಥಾನದ ವತಿಯಿಂದ ಮುಖ್ಯಮಂತ್ರಿಗೆ ಗೌರವ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹನೂರು ತಾಲ್ಲೂಕಿನಲ್ಲಿ ಪ್ರಜಾಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಚಾಮರಾಜನಗರ ತಾಲ್ಲೂಕಿನ ಮಂಗಲದಲ್ಲಿ ಕುರುಬ ಸಮಾಜದ ಕನಕ ಭವನಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಬಸವೇಶ್ವರರ ಪುತ್ಥಳಿ ಉದ್ಘಾಟನೆ ಹಾಗೂ ಭಗೀರಥ, ವಾಲ್ಮೀಕಿ ಹಾಗೂ ಕನಕದಾಸರ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.