
ಗುಂಡ್ಲುಪೇಟೆ: ಪಟ್ಟಣದ ಚಾಮರಾಜನಗರ ರಸ್ತೆಯಲ್ಲಿರುವ ಯೋಧ ಶಿವಾನಂದ ಸ್ಮಾರಕದ ಮುಂಭಾಗದಲ್ಲಿ ರಾಷ್ಟ್ರಗೀತೆ ಹಾಡಿ ಪುಷ್ಪಾರ್ಚನೆ ಮಾಡುವ ಮೂಲಕ 71ನೇ ಗಣರಾಜ್ಯೋತ್ಸವವನ್ನು ಕರ್ನಾಟಕ ಕಾವಲು ಪಡೆಯ ವತಿಯಿಂದ ಆಚರಿಸಲಾಯಿತು.
ಕಾವಲು ಪಡೆ ತಾಲ್ಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲಿಕ್ ಮಾತನಾಡಿ, ದೇಶಕ್ಕಾಗಿ ಶ್ರಮಿಸಿದ ರಾಷ್ಟ್ರ ನಾಯಕರನ್ನು ಸ್ಮರಿಸಬೇಕು ಎಂದು ತಿಳಿಸಿದರು.
ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಮಾಡ್ರಹಳ್ಳಿ ಸುಭಾಷ್ ಮಾತನಾಡಿ, ಸಂವಿಧಾನದಿಂದ ಇಂದು ಧೇಶದ ಪ್ರತಿಯೊಬ್ಬ ಪ್ರಜೆಯು ಸ್ವಾಭಿಮಾನದಿಂದ ನೆಮ್ಮದಿಯ ಬದುಕು ಬದುಕಲು ಸಾಧ್ಯವಾಗಿದೆ ಎಂದು ಹೇಳಿದರು.
ಕನ್ನಡಪರ ಹೋರಾಟಗಾರ ಬ್ರಹ್ಮಾನಂದ್ ಮಾತನಾಡಿದರು. ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಎಸ್.ಈಶ್ವರ್, ರೈತಪರ್ವ ಜಿಲ್ಲಾಧ್ಯಕ್ಷ ಆರ್.ಸೋಮಣ್ಣ, ಕಾವಲು ಪಡೆಯ ಜಿಲ್ಲಾ ಕಾರ್ಯಧ್ಯಕ್ಷ ಅಬ್ದುಲ್ ರಷೀದ್, ತಾಲ್ಲೂಕು ಕಾರ್ಯದರ್ಶಿ ಎಸ್.ಮುಬಾರಕ್, ಸಂಚಾಲಕ ಕುಂಜುಟ್ಟಿ, ಟೌನ್ ಉಪಾಧ್ಯಕ್ಷ ಸಾದಿಕ್ ಪಾಷ, ಟೌನ್ ಗೌರವಾಧ್ಯಕ್ಷ ಶಕೀಲ್, ಸಂಚಾಲಕರಾದ ಮಿಮಿಕ್ರಿ ರಾಜು, ಮುಕ್ತಿ ಕಾಲೋನಿ ಶಿವುಕುಮಾರ್, ಜಯ ಕರ್ನಾಟಕ ಸೇನೆ ತಾಲ್ಲೂಕು ಅಧ್ಯಕ್ಷ ಅನ್ಸರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.