ಚಾಮರಾಜನಗರ: ಜಿಲ್ಲೆಯಾದ್ಯಂತ ಭಾನುವಾರ ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆಯಾಗುತ್ತಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರ ಓಡಾಟ, ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದೆ.
ಎಲ್ಲ ತಾಲ್ಲೂಕುಗಳಲ್ಲೂ ಮಳೆಯಾಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ಬೆಳಿಗ್ಗೆ 7.30ಕ್ಕೆ ತುಂತುರು ಮಳೆ ಆರಂಭವಾಯಿತು. 8 ಗಂಟೆಯ ಬಳಿಕ ಜಿಟಿ ಜಿಟಿ ಮಳೆ ಶುರುವಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.