ADVERTISEMENT

ಚಾಮರಾಜನಗರ: ಕಾವೇರಿ ನೀರು ಬಿಡುಗಡೆ ವಿರೋಧಿಸಿ ಚಾವಟಿಯಿಂದ ಹೊಡೆದುಕೊಂಡು ಆಕ್ರೋಶ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2023, 11:43 IST
Last Updated 5 ನವೆಂಬರ್ 2023, 11:43 IST
<div class="paragraphs"><p>ಚಾಮರಾಜನಗರ: ಕಾವೇರಿ ನೀರು ಬಿಡುಗಡೆ ವಿರೋಧಿಸಿ ಚಾವಟಿಯಿಂದ ಹೊಡೆದುಕೊಂಡು ಆಕ್ರೋಶ</p></div>

ಚಾಮರಾಜನಗರ: ಕಾವೇರಿ ನೀರು ಬಿಡುಗಡೆ ವಿರೋಧಿಸಿ ಚಾವಟಿಯಿಂದ ಹೊಡೆದುಕೊಂಡು ಆಕ್ರೋಶ

   

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 54ನೇ ದಿನವಾದ ಭಾನುವಾರವೂ ನಗರದಲ್ಲಿ ಪ್ರತಿಭಟನೆ ನಡೆಸಿದರು. 

ಚಾವಟಿಯಿಂದ ಹೊಡೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು. 

ADVERTISEMENT

ಚಾಮರಾಜೇಶ್ಚರ ಉದ್ಯಾನದ ಮುಂಭಾಗದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿ, ವೃತ್ತದಲ್ಲಿ ಚಾವಟಿಯಿಂದ ಹೊಡೆದುಕೊಂಡು ಪ್ರತಿಭಟನೆ ನಡೆಸಿದರು. 

ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಸರ್ಕಾರಗಳು, ಕಾವೇರಿ ನಿರ್ವಹಣಾ ಪ್ರಾಧಿಕಾರಗಳು ತಮಿಳುನಾಡಿನ ಪರವಾಗಿದ್ದು, ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿವೆ’ ಎಂದರು. 

‘ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ  ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಅವರು ಆಗ್ರಹಿಸಿದರು.

ನಿಜದ್ವನಿಗೋವಿಂದರಾಜು, ಗು.ಪುರುಷೋತ್ತಮ, ನಂಜುಂಡಸ್ವಾಮಿ, ಚಾ.ಹ.ರಾಮು, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ವೀರಭದ್ರ, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.