ಕೊಳ್ಳೇಗಾಲ: ಇಲ್ಲಿನ ಎಪಿಎಂಸಿ ಮಾರುಕಟ್ಟೆಯಲ್ಲಿರುವ ಕರ್ನಾಟಕ ಆಹಾರ ನಿಗಮ ನಿಯಮಿತದ ಸಗಟು ಮಳಿಗೆಯ ಬಾಗಿಲನ್ನು ಮುರಿದು ದುರ್ಷ್ಕಮಿಗಳು ಸಾರ್ವಜನಿಕರ ವಿತರಣೆಗೆ ಸಂಗ್ರಹಿಸಿದ್ದ 69 ಕ್ವಿಂಟಲ್ ಪಡಿತರ ಅಕ್ಕಿಯನ್ನು ಕಳವು ಮಾಡಿದ್ದಾರೆ.
ಮ್ಯಾನೇಜರ್ ವಸಂತ್ ಕುಮಾರ್ ಅವರು ಬೆಳಿಗ್ಗೆ ಗೋಡೌನ್ ಬಾಗಿಲು ತೆರೆಯಲು ಬಂದಾಗ ಕಳವಾಗಿರುವುದು ಗೊತ್ತಾಗಿದೆ. ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ್ದ ಎ.ಎಸ್.ಪಿ ಶಶಿಧರ್, ಪಿಎಸ್ಐ ವರ್ಷಾ ಹಾಗೂ ಸಿಬ್ಬಂದಿ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಯಿಸಿ ಪರಿಶೀಲಿಸಿದರು.
ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.