ADVERTISEMENT

ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆ, ಚೆನ್ನೈನ ಸಿಂಧುಜಾ ಅನುಮಾನಾಸ್ಪದ ಸಾವು

28 ವರ್ಷದ ಸಿಂಧುಜಾ ಅವರಿಗೆ 2024ರ ಜನವರಿ 2ರಂದು ಮದುವೆ ನಿಶ್ಚಯವಾಗಿತ್ತು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2023, 10:39 IST
Last Updated 29 ಸೆಪ್ಟೆಂಬರ್ 2023, 10:39 IST
<div class="paragraphs"><p>ಡಾ. ಸಿಂಧುಜಾ</p></div>

ಡಾ. ಸಿಂಧುಜಾ

   

ಕೊಳ್ಳೇಗಾಲ: ಕೊಳ್ಳೇಗಾಲ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಡಾ. ಸಿಂಧುಜಾ (28) ಶುಕ್ರವಾರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ತಮಿಳುನಾಡಿನ ಚೆನ್ನೈನವರಾದ ಸಿಂಧುಜಾ ಅವರ ಊರಿನಲ್ಲಿ ಎಂಬಿಬಿಎಸ್ ಕೋರ್ಸ್ ಮಾಡಿದ್ದರು. ಆ ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದರು. ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗವಾಗಿ ಅವರು ನಗರದ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ADVERTISEMENT

ನಗರದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪವಿರುವ ಬಾಡಿಗೆ ಮನೆಯಲ್ಲಿ ವರ್ಷದಿಂದ ವಾಸವಿದ್ದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಆಸ್ಪತ್ರೆಯಲ್ಲಿ ಎಲ್ಲ ವೈದ್ಯರು ಹಾಗೂ ಸಿಬ್ಬಂದಿ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಸಿಂಧುಜಾ, ಗುರುವಾರ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು.

ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಬಾರದ ಕಾರಣ ವೈದ್ಯೆ ಲೋಕೇಶ್ವರಿ, ಅವರು ಮೊಬೈಲ್ ಗೆ ಕರೆ ಮಾಡಿದ್ದಾರೆ. ಸಿಂಧೂಜಾ ಕರೆ ಸ್ವೀಕರಿಸಿರಲಿಲ್ಲ. ಅನುಮಾನಗೊಂಡು ವೈದ್ಯರು ಹಾಗೂ ಸಿಬ್ಬಂದಿ ಮನೆಗೆ ಹೋಗಿದ್ದಾರೆ. ಕೂಗಿದರೂ ಬಾಗಿಲು ತೆರೆಯಲಿಲ್ಲ. ನಂತರ ಸಿಬ್ಬಂದಿ ಮನೆಯ ಕಿಟಕಿ ಗಾಜನ್ನು ಒಡೆದು ನೋಡಿದಾಗ ಡಾ.ಸಿಂಧುಜಾ ನೆಲದ ಮೇಲೆ ಬಿದ್ದಿದ್ದರು. ಪಕ್ಕದಲ್ಲಿ ಸಿರಿಂಜ್, ಔಷಧಿ, ಚಾಕು ಇನ್ನಿತರ ವಸ್ತುಗಳು ಇದ್ದವು ಎಂದು ತಿಳಿದು ಬಂದಿದೆ.

2024ರ ಜನವರಿ 2ರಂದು ಮದುವೆ ನಿಶ್ಚಯವಾಗಿತ್ತು ಎಂದು ವೈದ್ಯರು ಮಾಹಿತಿ ನೀಡಿದರು.

ವಿಷಯ ತಿಳಿದ ಡಿವೈಎಸ್ಪಿ ಸೋಮೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಸಾವು ಅನುಮಾನಾಸ್ಪದವಾಗಿದೆ. ಅವರು ಮನೆಯವರು ದೂರು ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಸೋಮೇಗೌಡ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.