ADVERTISEMENT

ಕೊಳ್ಳೇಗಾಲ: ಸಾಲದ ಹಣ ಕೇಳಲು ಹೋದ ವ್ಯಕ್ತಿಗೆ ಚಾಕು ಇರಿತ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 6:42 IST
Last Updated 4 ಡಿಸೆಂಬರ್ 2025, 6:42 IST
<div class="paragraphs"><p>ಹಣ </p></div>

ಹಣ

   

ಹಣ

ಕೊಳ್ಳೇಗಾಲ: ತಾಲ್ಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ಬುಧವಾರ ಸಾಲದ ಹಣ ಕೇಳಲು ಹೋದ ವ್ಯಕ್ತಿಗೆ ಚಾಕು ಇರಿಯಲಾಗಿದೆ.

ADVERTISEMENT

ಗ್ರಾಮದ ಸುನೀಲ್ ಗಾಯಗೊಂಡಿದ್ದು, ಅದೇ ಗ್ರಾಮದ ಆರೋಪಿ ರಾಜಪ್ಪ ಪರಾರಿಯಾಗಿದ್ದಾರೆ.

ಸಾಲದ ಹಣ ಕೇಳಲು ಬಂದಿದ್ದ ಸುನೀಲ್‌ಗೆ ರಾಜಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ, ಚಾಕುವಿನಿಂದ ಎಡತೋಳಿಗೆ ಇರಿದು ತೀವ್ರಗಾಯ ಮಾಡಿದ್ದಾರೆ. ತಕ್ಷಣ ಗ್ರಾಮಸ್ಥರು ಸುನೀಲ್ ಅವರನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.

ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.