ADVERTISEMENT

ಕೊಳ್ಳೇಗಾಲ: ಸೈಕಲ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 8:00 IST
Last Updated 26 ಫೆಬ್ರುವರಿ 2026, 8:00 IST
<div class="paragraphs"><p>(ಸಾಂದರ್ಭಿಕ ಚಿತ್ರ)</p></div>

(ಸಾಂದರ್ಭಿಕ ಚಿತ್ರ)

   

ಗೆಟ್ಟಿ ಚಿತ್ರ

ಕೊಳ್ಳೇಗಾಲ: ಇಲ್ಲಿನ ಬೆಂಡರಹಳ್ಳಿ ಬಡಾವಣೆಯಲ್ಲಿ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಬನ್ನಿ ಸಾರಿಗೆ ಗ್ರಾಮದ ಬಸವಣ್ಣ (48) ಮೃತಪಟ್ಟಿದ್ದಾರೆ.

 ಸ್ವಗ್ರಾಮಕ್ಕೆ ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ರಸ್ತೆಯಲ್ಲಿ ಬಿದ್ದು ತೀವ್ರ ಅಸ್ವಸ್ಥತೆಯಿಂದ ಒದ್ದಾಡುತ್ತಿದ್ದರು.  ಸ್ಥಳೀಯರು ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಿದರು. ಮಾರ್ಗ ಮಧ್ಯದಲ್ಲಿ ಬಸವಣ್ಣ ಮೃತಪಟ್ಟಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.