
ಕೊಳ್ಳೇಗಾಲ: ತಾಲ್ಲೂಕಿನ ನರೀಪುರ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಣೆ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ದಾಳಿ ಮಾಡಿ 19 ಅಕ್ಕಿ ಮೂಟೆಯನ್ನು ಭಾನುವಾರ ಜಪ್ತಿ ಮಾಡಿದ್ದಾರೆ.
ಹನೂರು ಕಡೆಯಿಂದ ಮಳವಳ್ಳಿ ಕಡೆಗೆ ಅಕ್ರಮವಾಗಿ ಅಕ್ಕಿಯನ್ನು ಸಾಗಣೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ಫುಡ್ ಇನ್ಸ್‌ಪೆಕ್ಟರ್ ಪ್ರಸಾದ್ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್ಐ ಚಲುವರಾಜು ಪೊಲೀಸ್ ಸಿಬ್ಬಂದಿ ಜೊತೆ ಜಂಟಿ ದಾಳಿ ನಡೆಸಿದರು. ಚಾಲಕ ವಾಹನವನ್ನು ನರೀಪುರ ಬೈಪಾಸ್ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ.
950 ಕೆಜಿ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ಜಪ್ತಿ ಮಾಡಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ವಾಹನ ಮಾಲೀಕನ ಪತ್ತೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ದಾಳಿಯಲ್ಲಿ ಗ್ರಾಮಾಂತರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರಾಜಪ್ಪ, ಕಾನ್‌ಸ್ಟೆಬಲ್‌ಗಳಾದ ಮನೋಹರ್, ಮಹದೇವಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.