
ಪ್ರಜಾವಾಣಿ ವಾರ್ತೆ
ಆರೋಪಿ ಕುಮಾರ್‌ನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ
ಕೊಳ್ಳೇಗಾಲ (ಚಾಮರಾಜನಗರ ಜಿಲ್ಲೆ): ಬಿಳಿಗಿರಿ ರಂಗನಾಥ ಸ್ವಾಮಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕೊಳ್ಳೇಗಾಲ ವನ್ಯಜೀವಿ ವಲಯದ ಗುಂಡಾಲ್ ಜಲಾಶಯದ ಬಳಿ ಈಚೆಗೆ ಉರುಳಿಗೆ ಸಿಲುಕಿ ಹುಲಿ ಮೃತಪಟ್ಟ ಪ್ರಕರಣದಲ್ಲಿ ಓರ್ವನನ್ನು ಬಂಧಿಸಲಾಗಿದೆ.
ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿಯ ಕುಮಾರ್ ಆರೋಪಿ.
ಫೆ.15ರಂದು ಉರುಳಿಗೆ ಸಿಲುಕಿದ 5 ವರ್ಷದ ಗಂಡು ಹುಲಿಯ ಕಳೆಬರ ಗುಂಡಾಲ್ ಜಲಾಶಯದಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ ಅಧಿಕಾರಿಗಳು ಆರೋಪಿಯ ಪತ್ತೆ ವಿಶೇಷ ತಂಡ ರಚಿಸಿ ಶೋಧ ಕಾರ್ಯ ನಡೆಸಿದ್ದರು. ಗುರುವಾರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.